NEWSರಾಜಕೀಯವಿಜ್ಞಾನ

ಉದ್ಯಮಸ್ನೇಹಿ ಶ್ರೇಯಾಂಕದಲ್ಲಿ ರಾಜ್ಯದ ಸ್ಥಾನ ಕುಗ್ಗಲು ಹಿಂದಿನ ಸರ್ಕಾರ ಕಾರಣ: ಬಿ.ವೈ.ವಿಜಯೇಂದ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2018-19ನೇ ಸಾಲಿನ ವರದಿ ಆಧಾರದ ಮೇಲೆ ಉದ್ಯಮಸ್ನೇಹಿ ರಾಜ್ಯಗಳ ಶ್ರೇಯಾಂಕದಲ್ಲಿ ಕರ್ನಾಟಕದ ಸ್ಥಾನ ಕುಗ್ಗಲು, ಹಿಂದೆ ಆಡಳಿತ ನಡೆಸಿದವರ ವೈಫಲ್ಯದ ಫಲ ಎಂಬುದನ್ನು ಅಂಕಿ-ಅಂಶಗಳೇ ಸಾಕ್ಷೀಕರಿಸುತ್ತಿವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು,  ನೆರೆ, ಕೋವಿಡ್ ಹಾವಳಿಗಳ ನಡುವೆಯೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸರ್ಕಾರ, ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಕಾಣಲು ಅವಕಾಶ ನೀಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನು ಭೂ-ಸುಧಾರಣ ಕಾಯ್ದೆಗೆ ತಿದ್ದುಪಡಿ ತಂದು ಕೃಷಿಕರ ಬದುಕೂ ಹಸನಾಗಬೇಕು, ರಾಜ್ಯಕ್ಕೆ ಸುಲಲಿತ ಬಂಡವಾಳವೂ ಹರಿದು ಬರಬೇಕು ಎಂಬ ಉದ್ದೇಶದಿಂದ ರಾಜ್ಯಸರ್ಕಾರ ರೈತ, ಉದ್ದಿಮೆ-ಸ್ನೇಹಿ ದಿಟ್ಟಹೆಜ್ಜೆ ಇರಿಸಿದೆ ಎಂದು ತಿಳಿಸಿದ್ದಾರೆ.

ಜತೆಗೆ 2008ರಲ್ಲಿ ಬಿಎಸ್ ವೈ ಸರ್ಕಾರ ಉದ್ದಿಮೆ ವಹಿವಾಟಿನ ಪಟ್ಟಿಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿತ್ತು ಎಂಬುದನ್ನು ನೆನಪಿಸಬಯಸುವೆ ಎಂದು ಹೇಳಿದ್ದಾರೆ.

ಎಷ್ಟೇ ಸಂಕಷ್ಟವಿರಲಿ, ಸವಾಲುಗಳಿರಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವದ್ದೇ ಸದ್ದು ಮೊಳಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಸ್ವಾವಲಂಬಿ ಭಾರತ ನಿರ್ಮಾಣ’ ದ ಸಂಕಲ್ಪಕ್ಕೆ ಕರ್ನಾಟಕ ಅಗ್ರಶ್ರೇಯಾಂಕದ ಕೊಡುಗೆ ನೀಡಲಿದೆ ಎಂಬ ವಿಶ್ವಾಸ  ಯಡಿಯೂರಪ್ಪ ಆಡಳಿತ ಶೈಲಿ ಬಲ್ಲವರದ್ದಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್