NEWSದೇಶ-ವಿದೇಶರಾಜಕೀಯ

ವಿಶ್ವದ ಅತೀ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣಕ್ಕಾಗಿ ಬಂದ ಪ್ರಧಾನಿ ಮೋದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವದ ಅತೀ ಎತ್ತರದ ಕೆಂಪೇಗೌಡ ಪ್ರತಿಮೆಯ ಅನಾವರಣವೂ ಒಳಗೊಂಡಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯುಪಡೆಯ ವಿಶೇಷ ವಿಮಾನದಲ್ಲಿ ಇಲ್ಲಿ ಇಂದು ನಗರಕ್ಕೆ ಆಗಮಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ‌ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸಧ ತೇಜಸ್ವಿ ಸೂರ್ಯ, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ಆರಕ್ಷಕ ಆಯುಕ್ತ ಪ್ರತಾಪ್ ರೆಡ್ದಿ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಪ್ರಧಾನಿ ಆಗಮನದ ಸಂದರ್ಭದಲ್ಲಿ ತುಂತುರು ಮಳೆ ಕೂಡಾ ಬಂದದ್ದು, ಪ್ರಧಾನಿ ಅವರನ್ನು ವರುಣ ಕೂಡಾ ಆಗಮಿಸಿದ್ದು ವಿಶೇಷವಾಗಿತ್ತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ