NEWSಆರೋಗ್ಯದೇಶ-ವಿದೇಶ

ಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಿದ ಪ್ರಧಾನಿ  ಮೋದಿ

ವಿಜಯಪಥ ಸಮಗ್ರ ಸುದ್ದಿ

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಯೋಗ ಮಾಡಿದರು.

ಈ ಬಾರಿ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದಡಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಸೆಯುವಲ್ಲಿ ಯೋಗದ ಪಾತ್ರದ ಮಹತ್ವ ತೋರಿಸುವುದು ಇದರ ಉದ್ದೇಶವಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು‌ ಮತ್ತು‌ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ, ಶ್ರೀನಗರದ ದಾಲ್‌ ಸರೋವರ ತೀರದ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಮಾಡಿದರು. ಇವರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕ್ಯಾಪ್ಚರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ‌ ಪ್ರತಿ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ