CrimeNEWSದೇಶ-ವಿದೇಶ

300ಕ್ಕೂ ಹೆಚ್ಚು ಮಂದಿ ಮೃತಪಟ್ಟ ಭೀಕರ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಬಾಲಸೋರ್ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

ದುರಂತ ಸ್ಥಳವನ್ನು ಪರಿಶೀಲಿಸಿದ ಬಳಿಕ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್ ಪ್ರೆಸ್ ರೈಲು ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸಾವಿನ ಸಂಖ್ಯೆ 300ಕ್ಕೂ ಹೆಚ್ಚಾಗಿದೆ.

ರೈಲು ಅಪಘಾತದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಪ್ರಧಾನಿಯವರ ಜತೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಅಧಿಕಾರಿಗಳು ಇದ್ದು ಮಾಹಿತಿ ನೀಡಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ