ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.
ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು: ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ. ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್
ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL
ನೆಲಮಂಗಲ: ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್
ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

ನಕಲಿ ಸುದ್ದಿಗೆ ಕಡಿವಾಣ: ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ನೀಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...