NEWSನಮ್ಮಜಿಲ್ಲೆನಮ್ಮರಾಜ್ಯ

ಪಿರಿಯಾಪಟ್ಟಣ: ಕಾರ್ಯದರ್ಶಿಗಳಿಂದ ಅಡಮಾನ ಪತ್ರ ಪಡೆಯಿರಿ: ಮೈಮುಲ್ ವ್ಯವಸ್ಥಾಪಕ ನಿಶ್ವಿತ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಹಾಲು ಉತ್ಪಾದಕ ಸಹಕಾರ ಸಂಘಗಗಳ ಕಾರ್ಯದರ್ಶಿಗಳಿಂದ ಅವರ ಚಿರಾಸ್ತಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಅಡಮಾನ ಪಡೆಯುವಂತೆ ಮೈಮುಲ್ ಪ್ರಭಾರ ವ್ಯವಸ್ಥಾಪಕ ಬಿ ಎಸ್.ನಿಶ್ವಿತ್ ತಿಳಿಸಿದ್ದಾರೆ.

ತಾಲೂಕಿನ ಹುಣಸವಾಡಿ ಹಾಗೂ ಕುಂದನಹಳ್ಳಿ, ಆಯಿತನಹಳ್ಳಿ ಗ್ರಾಮದಲ್ಲಿ ನಡೆದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಹೈನುಗಾರಿಕೆ ಹೆಚ್ಚು ಮಹತ್ವ ಪಡೆಯುತ್ತಿದೆ. ಹಾಗಾಗಿ ಇದರಿಂದ ಬರುವ ಆದಾಯವು ಹೆಚ್ಚುತ್ತಿದೆ. ಹಾಲು ಉತ್ಪಾದಕ ಸಹಕಾರ ಸಂಘಗಗಳಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಯದರ್ಶಿಗಳು ಸಂಘದ ಹಣವನ್ನು ದುರುಪಯೋಗ ಪಡಿಸುಕೊಳ್ಳುತ್ತಿರುವ ಉದಾಹರಣೆಗಳು ಸಾಕಷ್ಟು ಕಣ್ಣಮುಂದಿರುವ ಕಾರಣ ಕಾರ್ಯದರ್ಶಿಗಳಿಂದ ಅವರ ವೈಯಕ್ತಿಕ ಆಸ್ತಿಯನ್ನು ಅಡಮಾನ ಪಡೆದುಕೊಳ್ಳುವಂತೆ ಸಂಘದ ಆಡಳಿತ ಮಂಡಳಿ ಹಾಗೂ ಸದಸ್ಯರು ನಿರ್ಧಾರ ಕೈಗೊಳ್ಳಬೇಕು ಎಂದರು.

ಅದೇ ರೀತಿ ಉತ್ಪಾದಕರು ಸಹ ಒಕ್ಕೂಟಕ್ಕೆ ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಅಧಿಕ ಲಾಭ ಪಡೆಯುವುದಲ್ಲದೆ ತಮ್ಮ ಸಂಘದ ಹೆಸರನ್ನು ಅಜರಾಮರವಾಗುವಂತೆ ಮಾಡಬಹುದು.

ಈ ನಿಟ್ಟಿನಲ್ಲಿ ಒಕ್ಕೂಟವು ಹೈನುಗಾರಿಕೆಯನ್ನು ಉತ್ತೇಜಿಸಲು ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ವಿವಿಧ ವಿಮಾ ಸೌಲಭ್ಯಗಳು, ಹೈನುಗಾರಿಕೆಯಲ್ಲಿ ತೊಡಗುವ ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಹಾಗೂ ಪುರಸ್ಕಾರ, ರೈತ ಕಲ್ಯಾಣ ಯೋಜನೆ, ರಾಸುಗಳಿಗೆ ವಿಮಾ ಸೌಲಭ್ಯ, ಅಫಘಾತ ಹಾಗೂ ಅಕಾಲಿಕ ಮರಣ ಹೊಂದಿದ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಯೋನೆಗಳನ್ನು ಜಾರಿಗೊಳಿಸಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಘದ ಅಧ್ಯಕ್ಷರಾದ ಮೀನಾಕ್ಷಿ, ರಮೇಶ್, ಉಪಾಧ್ಯಕ್ಷೆ ಧನಲಕ್ಷ್ಮೀ, ಲಕ್ಷ್ಮೀ, ನಿರ್ದೇಶಕರಾದ ವಿನುತಾ, ಪುಟ್ಟಮ್ಮ, ಮಹದೇವಮ್ಮ, ಹರೀಶ್ ಕುಮಾರ್, ಕುಸುಮ, ಸುರೇಶ್, ಕೃಷ್ಣೇಗೌಡ ಹರ್ಷ, ಮಹೇಶ್, ನಾಗರಾಜು, ಶೈಲಾ, ಲತಾ, ಮಲ್ಲಿಗೆ, ಶೋಭ, ಚಂದ್ರಹಾಸ್, ಹನುಮಂತ, ಚಂದ್ರಮ್ಮ, ಜಗದೀಶ್, ಶಣ್ಣಮ್ಮ, ಸರಸ್ವತಿ, ಕಾರ್ಯನಿರ್ವಹಣಾಧಿಕಾರಿಗಳಾದ ಯಶಶ್ವಿನಿ, ದೇವರಾಜು, ಹಾಲು ಪರೀಕ್ಷಕ ಕುಸುಮಾ, ಸಚೀನ್, ರತ್ನ ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು