CrimeNEWSಬೆಂಗಳೂರುಸಿನಿಪಥ

ಡ್ರಗ್ ಪೆಡ್ಲರ್ ಜೊತೆ ಪತ್ನಿ ಅನೈತಿಕ ಸಂಬಂಧ: ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಿರ್ಮಾಪಕ ಚಂದ್ರಶೇಖರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ಟಿ.ಚಂದ್ರಶೇಖರ್ ತನ್ನ ಹೆಂಡತಿಯ ವಿರುದ್ಧವೇ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ನಿ ಡ್ರಗ್ ವ್ಯಸನಿಯಾಗಿದ್ದು, ಡ್ರಗ್ಸ್ ಗಾಗಿಯೇ ಆಕೆ ಡ್ರಗ್ ಪೆಡ್ಲರ್ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನಲ್ಲಿ ನಮಿತಾ ಅವರನ್ನು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಅಂದಿನಿಂದಲೂ ಆಕೆಯೊಂದಿಗೆ ಸವಾಗಿದ್ದೇನೆ. ನಮಗೆ ಇನ್ನೂ ಮಕ್ಕಳು ಇಲ್ಲ. ನನ್ನ ಹೆಂಡತಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವ್ಯಸನಿಯಾಗಿದ್ದಾಳೆ. ಅದನ್ನು ಬಿಡಿಸಲು ಬಹಳ ಸಾರಿ ಪ್ರಯತ್ನ ಪಟ್ಟಿದ್ದೇನೆ. ಆದರೂ ಕದ್ದು ಮುಚ್ಚಿ ಆಕೆ ಸೇವನೆ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, ‘ಇತ್ತೀಚೆಗೆ ಜನವರಿಯಿಂದ ಲಕ್ಷ್ಮೀಶ್ ಪ್ರಭು ಎಂಬ ಡ್ರಗ್ ಪೆಡ್ಲರ್ ನೊಂದಿಗೆ ಸಲುಗೆ ಬೆಳೆಸಿಕೊಂಡು ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ. ಅದಕ್ಕೆ ಸಂಬಂಧಪಟ್ಟಂತೆ ಸಾಕ್ಷಿಗಳು ನನಗೆ ಸಿಕಿದ್ದು, ನಾನು ನನ್ನ ಹೆಂಡತಿಗೆ ಬುದ್ದಿ ಹೇಳಿದ್ದೇನೆ. ಆದರೂ ನನ್ನ ಮಾತನ್ನು ಆಕೆ ತಿರಸ್ಕಾರ ಮಾಡಿ, ಅವನೊಂದಿಗೆ ಕದ್ದು ಮುಚ್ಚಿ ಸಂಬಂಧ ಇಟ್ಟುಕೊಂಡಿದ್ದಾಳೆ.

ಇನ್ನು ಅವನು ಮಾದಕ ವಸ್ತಗಳನ್ನು ಕೊಡುತ್ತಿರುತ್ತಾನೆ. ಈ ನಡುವೆ ಹೆಂಡತಿ ಮತ್ತು ಅವಳ ಪ್ರಿಯಕರ ಈ ವಿಚಾರವಾಗಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಶೇಖರ್, ಜೂನ್ 16ರಂದು 12.30ರಲ್ಲಿ ನಾನು ಇಲ್ಲದ ಸಮಯದಲ್ಲಿ ಲಕ್ಷ್ಮೀಶ್ ಪ್ರಭುವನ್ನು ಮನೆಗೆ ಕರೆಯಿಸಿಕೊಂಡು ಅವನೊಂದಿಗೆ ದೈಹಿಕ ಸಂಪರ್ಕದಲ್ಲಿದ್ದಾಗ ನಾನು ಪ್ರತ್ಯಕ್ಷವಾಗಿ ನೋಡಿ ನನ್ನ ಹೆಂಡತಿಯನ್ನು ಕೇಳಿದಾಗ ನನ್ನ ಹೆಂಡತಿ ಹಾಗೂ ಅವಳ ಪ್ರಿಯಕರ ನನ್ನ ಕೈ ಕಾಲು ಹಿಡಿದುಕೊಂಡು ರಕ್ತ ಬರುವಂತೆ ಹೊಡೆದಿದ್ದರು.

ನನ್ನ ಹೆಂಡತಿ ನನ್ನನ್ನು ಹಿಡಿದುಕೊಂಡು ಅವಳ ಪ್ರಿಯಕರ ನನ್ನ ಮೇಲೆ ಚಾಕುವಿನಿಂದ ಹಲ್ಲೇ ಮಾಡಿದ್ದ ಎಂದು ದೂರಿನಲ್ಲಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇತ್ತ ಪತಿಯ ಮೇಲೆ ಮರು ದೂರು ನೀಡಿರುವ ಪತ್ನಿ, ಮನೆಯಲ್ಲಿ ಡ್ರಗ್ ಇಟ್ಟು ಅರೆಸ್ಟ್ ಮಾಡಿಸ್ತಿನಿ ಎಂದು ಚಂದ್ರಶೇಖರ್ ಬೆದರಿಕೆ ಹಾಕಿದ್ದಾನೆ. ಅಷ್ಟಲ್ಲದೆ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ಥಳಿಸಿದ್ದಲ್ಲದೆ ಚಾಕುವಿನಿಂದ ತನ್ನ ಮೇಲೆ ಕೂಡ ಹಲ್ಲೆ ನಡೆಸಿರೋದಾಗಿ ಪತ್ನಿ ನಮಿತಾ ಪ್ರತಿದೂರು ನೀಡಿದ್ದಾರೆ.

ಸದ್ಯ ಈ ಸಂಬಂಧ ಪರಸ್ಪರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಅನಿಸಿದರೂ, ಹೆಂಡತಿಯ ವಿರುದ್ಧ ಚಂದ್ರಶೇಖರ್ ಗುರುತರ ಆರೋಪ ಮಾಡಿದ್ದಾರೆ.

ಚಂದ್ರಶೇಖರ್ ‘ಹೀಗೊಂದು ದಿನ’ ಹಾಗೂ ‘ಅಪ್ಪುಗೆ’ ಎಂಬ ಎರಡು ಚಿತ್ರಗಳ ನಿರ್ಮಾಪಕರಾಗಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು