NEWSಉದ್ಯೋಗನಮ್ಮಜಿಲ್ಲೆ

MCA ಸೇರಿ ಇತರೆ ಪದವಿ ಪಡೆದವರಿಗೆ ಪ್ರೋಗ್ರಾಮರ್ ಮ್ಯಾನೇಜರ್ ಹುದ್ದೆ: ಮೇ 30ರಂದು ನೇರ ಸಂದರ್ಶನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್‌ನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಇದೇ ಮೇ 30ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.

ಇನ್ನು ಈ ಹುದ್ದೆಗೆ ನೇಮಕಗೊಳ್ಳಲು ಅಭ್ಯರ್ಥಿಯು B.E/B TECH in CSE/ISE/IT or M.Tech(CS/IT) or MCA ವಿದ್ಯಾರ್ಹತೆ ಹೊಂದಿರಬೇಕು ಹಾಗೂ 3 Years experience in IT Industry as Software Programmer/ Developer, Experience in HTML, XML Javascript, ASPNET, Java Postgre SQL etc. ಅನುಭವ ಹೊಂದಿರಬೇಕು ಎಂದು ತಿಳಿಸಿದ್ದಾರೆ.

ನೇಮಕಗೊಂಡ ಅಭ್ಯರ್ಥಿಗಳಿಗೆ ಸಂಚಿತ ವೇತನ ₹29,000 ನೀಡಲಾಗುವುದು. ಇಚ್ಚೆಯುಳ್ಳ ಅರ್ಹ ಅಭ್ಯರ್ಥಿಗಳು ಮೇ 30 ರಂದು ಬೆಳಗ್ಗೆ 10.30 ರಿಂದ 11.30 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 207, 2ನೇ ಮಹಡಿ ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562110 ಇಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787452, Email : dhobangalorerural@gmail.com ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!