NEWSದೇಶ-ವಿದೇಶನಮ್ಮರಾಜ್ಯ

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ ಬಡವ ಬಲ್ಲಿದ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ ಎಂದರು.

ಇನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ‘ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ, ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ ಎಂದು ಕರೆ ನೀಡಿದರು.

ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ ಆದ್ದರಿಂದ ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬಾರದು ಎಂದರು.

ಇನ್ನು ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಸರಿಯಲ್ಲ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಜಾತಿ, ಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳ ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು ಎಂದು ಹೇಳಿದರು.

ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ನಾವು ನೀವೆಲ್ಲರೂ ಸೇರಿ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಬಲಪಡಿಸಲು ಶ್ರಮಿಸೋಣ ಎಂದು ಸಲಹೆ ನೀಡಿದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...