NEWSಕೃಷಿನಮ್ಮಜಿಲ್ಲೆ

ಸಾಲ ತಿರುವಳಿ ಮೇಳ ಮಾಡದ ಕಾವೇರಿ ಗ್ರಾಮೀಣ ಬ್ಯಾಂಕ್ ಕಚೇರಿ ಮುಂದೆ ರೈತ ಸಂಘಟನೆ ಪ್ರತಿಭಟನೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರೈತರ ಸಾಲ ಒಟಿಎಸ್ ಸಾಲ ಮೇಳ ನಡೆಸಲು ಒತ್ತಾಯಿಸಿ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಮೈಸೂರು ವಲಯ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ರೈತರು ಪ್ರತಿಭಟನೆ ನಡೆಸಿದರು.

ಬುಧವಾರ ವಲಯ ಕಚೇರಿ ಮುಂದೆ ಜಮಾವಣೆಗೊಂಡ ಅನ್ನದಾತರು, ಎಲ್ಲ ಬ್ಯಾಂಕುಗಳು ರೈತರ ಕೃಷಿ ಸಾಲ ಒಟಿಎಸ್ ಮೂಲಕ ತೀರುವಳಿ ಮಾಡುತ್ತಿದ್ದರು ಕಾವೇರಿ ಗ್ರಾಮೀಣ ಬ್ಯಾಂಕ್ ಸರ್ಕಾರದ ಆದೇಶ ಉಲ್ಲಂಘಿಸಿ ಒಟಿಎಸ್ ಸಾಲ ತಿರುವಳಿ ಮೇಳ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕ ರೈತರು ಸಾಲ ತೀರುವಳಿ ಮೇಳ ನಡೆಸುವಂತೆ ಒತ್ತಾಯಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿಗೆ ಮುತ್ತಿಗೆ ಹಾಕಿ ಸಾಲ ತೀರುವಳಿ ಮಾಡುವಂತೆ ಒತ್ತಾಯಿಸಿತು.

ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮಾಡಿ ತೀರಿಸಲು ಸಾದ್ಯವಾಗದೆ ಇರುವುದರಿಂದ ಮತ್ತೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ರಾಜ್ಯ ಮಾರ್ಗದರ್ಶಿ ಬ್ಯಾಂಕ್ (ಎಸ್‌ಎಲ್‌ಬಿಸಿ) ಆದೇಶ ಹೊರಡಿಸಿ ಬ್ಯಾಂಕ್ ಶಾಖೆಗಳಲ್ಲಿ ಒಟಿಎಸ್ ಸಾಲ ತಿರುವಳಿ ಮೇಳ ಹೆಚ್ಚು ಪ್ರಚಾರ ನೀಡಿ ನಡೆಸುವಂತೆ ಇದರ ಸದುಪಯೋಗ ರೈತರು ಪಡೆದು ಕೊಳ್ಳುವಂತೆ ನಾಮಫಲಕ ಅನಾವರಣ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ನೆರವಾಗಬೇಕು.

ಆದರೆ ಬ್ಯಾಂಕ್ ಶಾಖೆಗಳಲ್ಲಿ ಪ್ರಚಾರ ಮಾಡದೆ ಇರುವುದು ಮುಗ್ಧ ಅಮಾಯಕ ರೈತರು ಈ ಅವಕಾಶದಿಂದ ವಂಚಿತರಾಗಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಹೋರಾಟ ನಡೆಸಿದ ಪರಿಣಾಮ ಈ ಆದೇಶ ಹೊರಡಿಸಲಾಗಿದೆ. ಆದರೆ ಕೆಲವು ಶಾಖೆಗಳು ಇದನ್ನು ಮರೆಮಾಚಿ ರೈತರಿಗೆ ವಂಚನೆ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಟಿಎಸ್ ಮೇಳದ ಅನುಕೂಲ ಎಲ್ಲ ರೈತರಿಗೂ ಸಿಗಬೇಕು. ನಿಮ್ಮ ಶಾಖೆಗಳಲ್ಲಿ ಹೆಚ್ಚು ಪ್ರಚಾರ ಮಾಡಿ ರೈತರಿಗೆ ವಂಚನೆ ಮಾಡದೆ ಅನುಕೂಲ ಮಾಡಿ ಕೊಡಬೇಕೆಂದು ಹಾಗೂ ಒಟಿಎಸ್ ಮಾಡಿದ ರೈತರಿಗೆ ಮತ್ತೆ ಸಾಲ ಕೊಡಬೇಕು ಎಂದು ಪ್ರತಿಭಟನಾಕಾರರು ಬ್ಯಾಂಕ್ ವಿರುದ್ಧ ವಿವಿಧ ಶಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಬ್ಯಾಂಕ್ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿದರು.

ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯಾದವಮೂರ್ತಿ ಹಾಗೂ ಸೀನಿಯರ್ ಮ್ಯಾನೇಜರ್ ಭಾನುಪ್ರಕಾಶ್ ಪ್ರತಿಭಟನಾ ನಿರತ ರೈತರ ಮನವಲಿಸಿ ಬ್ಯಾಂಕ್‌ಗಳಲ್ಲಿ ನಾಮಫಲಕ ಅನಾವರಣ ಮಾಡಿಸಿ ಹೆಚ್ಚು ಪ್ರಚಾರ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ಒಟಿಎಸ್ ಮೇಳದ ಅನುಕೂಲ ಎಲ್ಲ ರೈತರಿಗೂ ಸಿಗುವಂತೆ ಎಲ್ಲ ಶಾಖೆಗಳಿಗೆ ಇಂದೆ ಸೂಚನೆ ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್,ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಮಹಿಳಾ ಅಧ್ಯಕ್ಷೆ ಕಮಲಮ್ಮ, ರೈತ ಮಹಿಳೆ ಸಾಕಮ್ಮ, ಅಂಬಳೆ ಮಂಜುನಾಥ್, ಬನ್ನೂರು ಸೂರಿ, ಚುಂಚಾರಾಯನ ಹುಂಡಿ ಗುಂಡು, ಶಂಭು ದೇವನಪುರ ಪ್ರಭುಸ್ವಾಮಿ ಮುಂತಾದವರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ