NEWSನಮ್ಮಜಿಲ್ಲೆಸಂಸ್ಕೃತಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ ಖಂಡಿಸಿ ಕನ್ನಡಾಭಿಮಾನಿಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹಾವೇರಿಯಲ್ಲಿ ಆರಂಭವಾದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ದೂರದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್‌ಗೆ ಹೋದರೆ ಕೌಂಟರ್‌ನಲ್ಲಿ ಕೇಳುವವರೇ ಇಲ್ಲ. ಸಮ್ಮೇಳನ ಅವ್ಯವಸ್ಥೆಯ ಆಗರವಾಗಿde ಎಂದು ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಆನ್ ಲೈನ್‌ನಲ್ಲಿ ನೋಂದಣಿ ಮಾಡಿದವರು ನೋಂದಣಿಯ ಬಗ್ಗೆ ವಿಚಾರಿಸಿದರೇ ನೋಂದಣಿ ಕೌಂಟರಿನಲ್ಲಿ ನೋಂದಣಿ ಮಾಡಿಕೊಂಡ ವಿವರಗಳೇ ಇಲ್ಲ. ವಸತಿ ಸೌಕರ್ಯ ಕಲ್ಪಿಸಿರುವವಲ್ಲಿನ ಅಧಿಕಾರಿಗಳಿಗೆ ಕರೆ ಮಾಡಿದರೇ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕನ್ನಡಾಭಿಮಾನಿಗಳು ಆರೋಪಿಸಿದ್ದಾರೆ.

ಇದಲ್ಲದೆ ಹಣ ಕಟ್ಟಿದರೂ ಕೂಡ ನೋಂದಣಿ ಕೌಂಟರ್‌ನಲ್ಲಿ ಬ್ಯಾಗ್ ಮತ್ತು ಇತರ ಸೌಲಭ್ಯ ಇಲ್ಲ ಎನ್ನುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸಮ್ಮೇಳನದ ನೋಂದಣಿ ಕೌಂಟರ್‌ನ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದರು‌.

ಜನವರಿ 6ರಿಂದ ಆರಂಭವಾಗಿರುವ ಕನ್ನಡ ಸಾಹಿತ್ಯ ಸಮ್ಮೇಳನ ಮೂರು ದಿನಗಳ ಕಾಲ ನಡೆಯಲಿದೆ. ಸಮ್ಮೇಳನಕ್ಕೆ ಸುಮಾರು 128 ಹೆಕ್ಟೇರ್‌ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಪ್ರಧಾನ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕುಳಿತುಕೊಳ್ಳಲು ಆಸನ ಕಲ್ಪಿಸಲಾಗಿದೆ. ಜೊತೆಗೆ ಸಮಾನಾಂತರ ವೇದಿಕೆ ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ಸಾವಿರಾರು ಜನರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ನೋಡುಗರನ್ನು ತನ್ನತ್ತ ಸೆಳೆಯುತ್ತಿಋುವ ಫಲಫುಷ್ಪ ಪ್ರದರ್ಶನ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ತೋಟಗಾರಿಗೆ ಇಲಾಖೆ ಸುಮಾರು 1 ಲಕ್ಷ 50 ಸಾವಿರ ಪುಷ್ಪಗಳಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿದೆ. ಜಿಲ್ಲಾಡಳಿತ ಫಲಫುಷ್ಪ ಪ್ರದರ್ಶನಕ್ಕೆ 10 ಗುಂಟೆ ಪ್ರದೇಶ ನೀಡಿದ್ದು, ಇಲಾಖೆ ಸಿದ್ಧತೆಮಾಡಿಕೊಂಡಿದೆ.. ಫಲಪುಷ್ಪಪ್ರದರ್ಶನದಲ್ಲಿ ಪುಷ್ಪಗಳಿಂದ, ತರಕಾರಿಗಳಿಂದ ಹಣ್ಣುಗಳಿಂದ ಮತ್ತು ಸಿರಿಧಾನ್ಯಗಳಿಂದ ವಿವಿಧ ಕಲಾಕೃತಿ ರಚಿಸಲಾಗಿದ್ದು, ಇವು ನೋಡುಗರನ್ನು ತನ್ನತ್ತ ಸೆಳೆಯುತ್ತಿವೆ.

[wp-rss-aggregator limit=”2″ pagination=”on”]

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ