CrimeNEWSನಮ್ಮಜಿಲ್ಲೆ

ಲಿಂಗಧೀರನಹಳ್ಳಿ ತ್ಯಾಜ್ಯ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ – ಎಎಪಿ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಶವಂತಪುರ ವಿಧಾನಸಭಾ ಕೇತ್ರದ ಲಿಂಗಧೀರನಹಳ್ಳಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ನೀಡಿದೆ.

ಕಳೆದ ಎಂಟು ದಿನಗಳಿಂದ ಪ್ರತಿಭಟನಾಕಾರರ ಜತೆಗಿರುವ ಯಶವಂತಪುರ ಕ್ಷೇತ್ರದ ಎಎಪಿ ಸಂಭಾವ್ಯ ಅಭ್ಯರ್ಥಿ ಶಶಿಧರ ಆರಾಧ್ಯ ಮಾತನಾಡಿ, “ತ್ಯಾಜ್ಯ ಸಂಸ್ಕರಣಾ ಘಟಕದಿಂದಾಗಿ ಲಿಂಗಧೀರನಹಳ್ಳಿ ಪರಿಸರ ಸಂಪೂರ್ಣ ಹಾಳಾಗಿದೆ. ಹಲವು ವರ್ಷಗಳಿಂದ ಇಲ್ಲಿನ ಸ್ಥಳೀಯರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ಇನ್ನು ಸುತ್ತಮುತ್ತಲಿನ ಜನರ ಆರೋಗ್ಯ ಹಾಗೂ ಜೀವದ ಜತೆ ರಾಜ್ಯ ಸರ್ಕಾರ, ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್‌ ಹಾಗೂ ಬಿಬಿಎಂಪಿ ಚೆಲ್ಲಾಟವಾಡುತ್ತಿದೆ. ಯಶವಂತಪುರವನ್ನು ಕಸವಂತಪುರವನ್ನಾಗಿ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

ಬೆಂಗಳೂರಿನ ಹಲವು ಭಾಗಗಳ ಕಸವನ್ನು ಲಿಂಗಧೀರನಹಳ್ಳಿಯಲ್ಲಿ ಸುರಿಯುತ್ತಿರುವುದರಿಂದ ಇಲ್ಲಿ ನೊಣಗಳ ಕಾಟ ವಿಪರೀತವಾಗಿದೆ. ಅಡುಗೆಗೂ ನೊಣಗಳು ಬಂದು ಬೀಳುವಷ್ಟು ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಎದುರಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಣ್ಣ ಗಾಳಿ ಬೀಸಿದರೂ ಊರ ತುಂಬಾ ಕೆಟ್ಟ ವಾಸನೆ ಬರುತ್ತಿದೆ. ಎಲ್ಲರಂತೆ ಇಲ್ಲಿನ ಜನರು ಕೂಡ ಸರ್ಕಾರಕ್ಕೆ ನಾನಾ ರೀತಿಯ ತೆರಿಗೆಗಳನ್ನು ಕಟ್ಟುತ್ತಾರೆ. ಅದಕ್ಕೆ ಪ್ರತಿಯಾಗಿ ಸರ್ಕಾರವು ಇಂತಹ ಕೆಟ್ಟ ವಾತಾವರಣವನ್ನು ನಿರ್ಮಿಸಿಕೊಟ್ಟಿರುವುದು ದುರಂತ. ಶೀಘ್ರವೇ ಈ ಘಟಕವನ್ನು ಯಾವುದಾದರೂ ನಿರ್ಜನ ಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ