ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಪ್ರತಿಭಟನೆ ನಡೆಸಲಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್ ಮತ್ತು ಹುಬ್ಬಳ್ಳಿ ಹಾಗೂ ಕಲಬುರಗಿಯ ಸಾರಿಗೆ ಕೇಂದ್ರ ಕಚೇರಿಗಳ ಮುಂದೆ ಧರಣಿಗೆ ಕೂರಲಿದ್ದಾರೆ.
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದು, ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಈ ಧರಣಿಯಲ್ಲಿ ಭಾಗವಹಿಸುತ್ತಿರುವುದರಿಂದ ಸಂಚಾರದಲ್ಲಿ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಈ ಧರಣಿಯಿಂದ ಸಾರ್ವಜನಿಕರ ಪ್ರಯಾಣಕ್ಕೆ ಏನು ಸಮಸ್ಯೆ ಇಲ್ಲ.
ಇನ್ನು ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆಗಳು ಮೊದಲ ಹಂತದಲ್ಲಿ ಸಾಂಕೇತಿಕ ಧರಣಿ ನಡೆಸುತ್ತಿದ್ದು, ಇದರಲ್ಲಿ ಆರು ನೌಕರರ ಸಂಘಟನೆಗಳು 13 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಇಳಿದಿವೆ.
ಕಳೆದ 7 ವರ್ಷದ ಹೀಂದೆ ವೇತನ ಹೆಚ್ಚಳ ಮಾಡಲಾಗಿತ್ತು. ಅದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವುದು ಆ ಬಳಿಕ ಮತ್ತೆ 2020 ಜನವರಿ 1ರಂತೆ ವೇತನ ಹೆಚ್ಚಳ ಮಾಡಬೇಕಿದ್ದು ಈವರೆಗೂ ಬಿಜೆಪಿ ನೇತೃತವದ ರಾಜ್ಯ ಸರ್ಕಾರ ಇನ್ನೂ ಮಾಡಿಲ್ಲ.
ಇದರಿಂದ ಅಧಿಕಾರಿಗಳು ಮತ್ತು ನೌಕರರ ಕುಟುಂಬ ನಿರ್ವಹಣೆ ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಧರಣಿ ನಡೆಸಲು ಮುಂದಾಗಿದ್ದೇವೆ ಎಂದು ಸಂಘಟನೆಳ ಮುಖಂಡರು ತಿಳಿಸಿದ್ದಾರೆ.