NEWSನಮ್ಮಜಿಲ್ಲೆನಮ್ಮರಾಜ್ಯ

ಸೆ.30ರಂದು ಗದಗದಲ್ಲಿ ಸಾರಿಗೆ ಡಿಸಿ ವಿರುದ್ಧ ನಿವೃತ್ತ ನೌಕರರ ಅರೆಬೆತ್ತಲೆ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಗದಗ: ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಕಾರ್ಮಿಕರಿಗೆ 2016 ರಿಂದಲೂ ಅಗತ್ಯ ಸೌಲಭ್ಯ ನೀಡದೇ ವಿಭಾಗೀಯ ನಿಯಂತ್ರಣಾಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸೆ.30 ರಂದು ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದು ಗದಗ ಸಾರಿಗೆ ಸಂಸ್ಥೆ ನಿವೃತ್ತ ಕಾರ್ಮಿಕರ ಮುಖಂಡ ಎಚ್‌.ಎಚ್‌. ದೊಡ್ಡಮನಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಕಳೆದ 6 ವರ್ಷಗಳಿಂದ ನಮ್ಮ ವೇತನದಲ್ಲಿನ ಹಣವನ್ನು ಮರಳಿ ನೀಡಲು ಸಾರಿಗೆ ನಿಯಂತ್ರಣ ಅಧಿಕಾರಿಗಳು ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ಈ ವಿಷಯವಾಗಿ ನಮ್ಮ ಸಂಸ್ಥೆಯ ಕಾರ್ಮಿಕ ಕಲ್ಯಾಣ ಅಧಿಕಾರಿಗಳು, ಮುಖ್ಯಮಂತ್ರಿಗಳು, ವಿಪಕ್ಷ ನಾಯಕರು, ಸಾರಿಗೆ ಸಚಿವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮಾಧ್ಯಮದ ಮುಂದೆ ಬಂದು ನಮ್ಮ ನೋವನ್ನು ತೋಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಯೊಬ್ಬ ಕಾರ್ಮಿಕನಿಗೆ ಅ೦ದಾಜು 1 ಲಕ್ಷ ರೂಪಾಯಿವರೆಗೆ ಬರಬೇಕು. ಈ ಹಣಕ್ಕಾಗಿ ಗದಗ ಜಿಲ್ಲೆಯ 150ಕ್ಕೂ ಹೆಚ್ಚಿನ ಕಾರ್ಮಿಕರಿಗೆ ಈ ಸೌಲಭ್ಯ ಸಿಗಬೇಕಿದೆ. ನಾವು ಮನವಿ ಕೊಡಲು ಹೋದರೂ ಸಾರಿಗೆ ಅಧಿಕರಿಗಳು ಅದನ್ನು ಸ್ವೀಕರಿಸುತ್ತಿಲ್ಲ, ಸತಾಯಿಸುತ್ತಿದ್ದಾರೆ.

ಡಿಸಿ ಅವರ ವರ್ತನೆ, ವಿಳಂಬ ಧೋರಣೆಯಿಂದ ನಾಲ್ವರು ಸಿಬ್ಬಂದಿಗಳ ಚಿಕಿತ್ಸೆಗೆ ಹಣವಿಲ್ಲದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಸರ್ಕಾರ ಅವರನ್ನು ಬೇರೆಡೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಟಿ.ಬಿ. ಹೆಗರಿ, ಬಿ.ಎಸ್. ಸಾಲಿಮಠ, ಎಂ.ಎಚ್. ಮೊಕಾಶಿ, ಬಸವರಾಜ ಶೆಟ್ಟಿಕೇರಿ, ಎಸ್‌.ಕೆ. ರಾಯಬಾಗಿ ಸೇರಿದಂತೆ ಮತ್ತಿತರರು ಇದ್ದರು.

Editordev
the authorEditordev

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...