CrimeNEWSನಮ್ಮಜಿಲ್ಲೆ

ಗೋ ಹತ್ಯೆ ವಿರುದ್ಧ ಪ್ರತಿಭಟನೆ ಹಿನ್ನೆಲೆ: ಇಂದು ಸಕಲೇಶಪುರದಲ್ಲಿ ನಿಷೇಧಾಜ್ಞೆ ಜಾರಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಗೋಹತ್ಯೆ ಹಾಗೂ ಗೋ ಮಾಂಸ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ವಿಎಚ್‍ಪಿ, ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಸಕಲೇಶಪುರ ಪಟ್ಟಣದ ಮೂರು ಕಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಸಂಘಟನೆಯಿಂದ ಕುಶಾಲನಗರ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಗಿರೀಶ್ ಆರ್.ನಂದನ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಸಕಲೇಶಪುರ ಪಟ್ಟಣದ ಕುಶಾಲನಗರ, ಪ್ರೇಮನಗರ ಹಾಗೂ ಅಜಾದ್ ರಸ್ತೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

ಸಕಲೇಶಪುರದಲ್ಲಿ ಗೋ ಹತ್ಯೆ ನಡೆಸಿ ಚರಂಡಿಗಳಲ್ಲಿ ರಕ್ತ, ತ್ಯಾಜ್ಯ ಹರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಡಳಿತ ಪ್ರತಿಭಟನೆಗೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?