ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ತಲಾದಾಯ, ಕೃಷಿ, ಹೈನಗಾರಿಕೆ, ಕೈಗಾರಿಕೆ, ಸೇವಾ ವಿಭಾಗ, ಸಾಮಾಜಿಕ ವಲಯಗಳ ಮಾನದಂಡಗಳ ಆಧಾರದ ಮೇಲೆ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಅಭಿವೃದ್ಧಿ ಸೂಚ್ಯಂಕವನ್ನು ಆಧರಿಸಿ ಹಿಂದುಳಿದ ತಾಲೂಕುಗಳು ಯಾವುವು ಎಂಬುದನ್ನು ಗುರುತಿಸಿ ಆ ತಾಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾಗುವ ಆರ್ಥಿಕ ಸೌಲಭ್ಯವನ್ನು ಒದಗಿಸಲು ಸರ್ಕಾರಕ್ಕೆ ಸಮಿತಿ ವತಿಯಿಂದ ಶಿಫಾರಸು ಮಾಡಲಾಗುವುದು ಎಂದು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ.ಎಂ.ಗೋವಿಂದ ರಾವ್ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಿತಿಯು ರಾಜ್ಯದ 240 ತಾಲ್ಲೂಕುಗಳ ಅಧ್ಯಯನ ನಡೆಸುತ್ತದೆ. ಕಲಬುರ್ಗಿ, ಬೆಳಗಾವಿ, ಮೈಸೂರು, ಬೆಂಗಳೂರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. 240 ತಾಲ್ಲೂಕುಗಳಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಮತ್ತು ಅತೀ ಹಿಂದುಳಿದ ಹಾಗೂ ಹಿಂದುಳಿದ ತಾಲ್ಲೂಕುಗಳು,ಮುಂದುವರಿದ ತಾಲ್ಲೂಕುಗಳು, ಅತೀ ಮುಂದುವರಿದ ತಾಲ್ಲೂಕುಗಳು ಎಂದು ವಿಂಗಡಿಸಿ ಯಾವ ಕಾರಣಕ್ಕೆ ತಾಲ್ಲೂಕು ಹಿಂದುಳಿದಿದೆ ಎಂದು ತಿಳಿಯಲು, ಮುಂದುವರೆದಿರುವ ತಾಲ್ಲೂಕುಗಳಿಂದ ಹಿಂದುಳಿದ ತಾಲ್ಲೂಕುಗಳನ್ನು ಹೇಗೆ ಸುಧಾರಣೆ ಮಾಡಬೇಕು ಎಂಬ ಮಾಹಿತಿಯನ್ನು ತಾಲೂಕುವಾರು ಪಡೆಯಲಾಗುವುದು.
‘2002ರಲ್ಲಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಅನ್ವಯ 175 ತಾಲ್ಲೂಕುಗಳ ಅಧ್ಯಯನ ನಡೆಸಿದ್ದರು. ಅದರಲ್ಲಿ 114 ತಾಲ್ಲೂಕುಗಳ ಪೈಕಿ 39 ತಾಲ್ಲೂಕು ಅತೀ ಹಿಂದುಳಿದ, 40 ಅತ್ಯಂತ ಹಿಂದುಳಿದ, 35 ಹಿಂದುಳಿದ ತಾಲ್ಲೂಕುಗಳು ಎಂದು ಗುರ್ತಿಸಲಾಗಿತ್ತು. ರಾಜ್ಯದ ಹಿಂದುಳಿದ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 2007 ರಿಂದ 2023 ವರೆಗೆ 43456.96 ಕೋಟಿ ಶಿಫಾರಸ್ಸು ಮಾಡಲಾಗಿತ್ತು. ಅದರಲ್ಲಿ 35380.25 ಕೋಟಿ ಬಿಡುಗಡೆ ಆಗಿ 32610.24 ಕೋಟಿ ಖರ್ಚಾಗಿದೆ ಎಂದರು.
‘ರಾಜ್ಯ ಸರ್ಕಾರ 2024ರಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಕರ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ, ಸೂಚ್ಯಂಕ ನಿಗದಿಪಡಿಸಲಿದೆ. ಸಮಿತಿಯು ಅಕ್ಟೋಬರ್ 2025 ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುವಾರು ತಲಾದಾಯ ಅಂಕಿ ಅಂಶ:
ದೇವನಹಳ್ಳಿ ತಾಲೂಕು: 77.89
ದೊಡ್ಡಬಳ್ಳಾಪುರ ತಾಲೂಕು: 85.99
ಹೊಸಕೋಟೆ ತಾಲೂಕು: 91.96
ನೆಲಮಂಗಲ ತಾಲೂಕು: 131.54
ಬೆಂಗಳೂರು ಗ್ರಾಮಾಂತರ ಜಿಲ್ಲೆ : 95.60
ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳು ರಾಜ್ಯದ ಸರಾಸರಿ ತಲಾದಾಯದಲ್ಲಿ ಹಿಂದುಳಿದ ತಾಲೂಕುಗಳಾಗಿವೆ. ಶಿಕ್ಷಣ ಹಾಗೂ ಆರೋಗ್ಯ ಸೂಚ್ಯಂಕದಲ್ಲಿ ಕ್ರಮವಾಗಿ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ ಎಂದರು.
ಜಿಲ್ಲೆಗೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ, ಮೂಲಸೌಕರ್ಯ, ತಂತ್ರಜ್ಞಾನ, ಅಭಿವೃದ್ಧಿ, ಸಮಸ್ಯೆಗಳ ಬಗ್ಗೆ ವಿಷಯಾಧಾರಿತ ಚರ್ಚೆ ನಡೆಸಿದ ಸಮಿತಿಯು ಅಧಿಕಾರಿಗಳಿಂದ, ಜಿಲ್ಲೆಯ ಸಂಘ ಸಂಸ್ಥೆಗಳ ಮುಖಂಡರಿಂದ ಮಾಹಿತಿ ಪಡೆದುಕೊಂಡರು. ಸಮಿತಿಯು ಗುರುತಿಸಿರುವ ವಿಷಯಗಳಲ್ಲದೇ ಜಿಲ್ಲೆಗೆ ಸಂಬಂಧಿಸಿದಂತೆ ಇನ್ನೂ ಅನೇಕ ವಿಷಯಗಳನ್ನು ಗಮನಿಸಲಿದೆ’ ಎಂದರು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಕುಡಿಯುವ ನೀರು ಪೂರೈಕೆ, ರೈಲ್ವೇ ಸೌಕರ್ಯ, ತ್ಯಾಜ್ಯ ನಿರ್ವಹಣೆ ಘಟಕಗಳು, ನೀರು ಶುದ್ಧೀಕರಣ ಘಟಕಗಳು ಸ್ಥಾಪನೆ ಆಗಬೇಕಿದೆ. ಮೆಡಿಕಲ್ ಕಾಲೇಜು ಆಗಬೇಕು, ಜಿಲ್ಲಾ ಆಸ್ಪತ್ರೆಗೆ ಅನುದಾನದ ಅವಶ್ಯಕತೆ ಇದ್ದು ಜಿಲ್ಲೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಪತ್ರದ ಮುಖೇನ ನೀಡಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಮಿತಿಯಲ್ಲಿ ಕೋರಿದರು.
ಸಭೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಎಂ.ಎಚ್. ಸೂರ್ಯನಾರಾಯಣ, ಸಿಇಒ ಡಾ.ಕೆ ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....