NEWSನಮ್ಮಜಿಲ್ಲೆ

ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಸವರಾಜು ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೆರವು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿಗಳನ್ನು ನೀಡಿದರೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ ನೆರವು ಕಲ್ಪಿಸಬೇಕು. ತರಬೇತಿ ಸಂಸ್ಥೆಗಳ ಮೂಲಕ ನಿರುದ್ಯೋಗ ಯುವಕ ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ಕಲ್ಪಿಸಿ ಎಂದರು.

ಜಿಲ್ಲೆಯಲ್ಲಿನ ಕೈಗಾರಿಕೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ವಿವರ ಪಡೆದು ಭರ್ತಿ ಮಾಡಿಕೊಳ್ಳಲು ಕೈಗಾರಿಕಾ ಮುಖ್ಯಸ್ಥರ ಸಭೆ ನಡೆಸಿ. ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜನೆಗೆ ಸಿದ್ಧತೆ ಕೈಗೊಳ್ಳಿ ಇದರಿಂದ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲು ಸಹಕಾರಿ ಆಗಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಮತ್ತು ಪದವಿ ಮತ್ತು ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು, ಕೈಗಾರಿಕಾ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ