NEWSನಮ್ಮಜಿಲ್ಲೆಶಿಕ್ಷಣ-

ಪೃಥ್ವಿರಾಜ್‌ ಎಲ್‌. ದ್ವಿತೀಯ ಪಿಯು ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಪೃಥ್ವಿರಾಜ್‌ ಎಲ್‌. 600ಕ್ಕೆ 427 ಅಂಕ ಪಡೆಯುವ ಮೂಲಕ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಪೃಥ್ವಿರಾಜ್‌ ಎಲ್‌. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಜನಮಿತ್ರ ಪತ್ರಿಕೆಯ ಪ್ರಸರಣಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಲಿಂಗರಾಜು ಮತ್ತು ಪದ್ಮ ದಂಪತಿಯ ಪುತ್ರ.

ಪೃಥ್ವಿರಾಜ್‌ ಎಲ್‌. ಮೈಸೂರಿನ ಕುವೆಂಪು ನಗರದ ಸರ್ಕಾರಿ ಪರವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬುಧವಾರ ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 427 ಅಂಕ ಪಡೆದು ಮೊದಲ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಪೂರ್ವಿಕ್ ಎಸ್.ವಿ.ದಾಸ್  ರಾಜ್ಯಕ್ಕೆ ಐದನೇ ರ‍್ಯಾಂಕ್‌

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಪೂರ್ವಿಕ್ ಎಸ್.ವಿ.ದಾಸ್ 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ ಐದನೇ ರ‍್ಯಾಂಕ್‌ ಪಡೆದಿದ್ದಾರೆ.

ಪೂರ್ವಿಕ್ ಎಸ್.ವಿ.ದಾಸ್ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ, ಹುಲಿಯೂರುದುರ್ಗ ಹೋಬಳಿಯ ಚೌಡನಕುಪ್ಪೆ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ.ಸಿ.ಡಿ. ವೆಂಕಟೇಶ್ ಮತ್ತು ಡಾ. ಶಶಿಕಲಾ ದಂಪತಿಯ ಪುತ್ರ.

ಪೂರ್ವಿಕ್ ಬೆಂಗಳೂರಿನ ಶಾರದನಗರ ವಸಂತಪುರ, ಉತ್ತರಹಳ್ಳಿ ಮುಖ್ಯ ರಸ್ತೆಯ ವೇದಾಂತ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬುಧವಾರ ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ ಐದನೇ ರ‍್ಯಾಂಕ್‌ ಬಂದಿದ್ದಾರೆ.

ಈ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು