
- 600/597 ಅಂಕ ಪಡೆದ ಸಂಜನಾಬಾಯಿ ಪ್ರಥಮ
- 600/596 ಅಂಕ ಪಡೆದ ಕೆ.ನಿರ್ಮಲಾ ದ್ವಿತೀಯ ಸ್ಥಾನ
ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.
600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದಾರೆ.
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಕೆ.ನಿರ್ಮಲಾ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ನಿರ್ಮಲಾ 600ಕ್ಕೆ 596 ಅಂಕ ಪಡೆದಿದ್ದಾರೆ.