NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪುಟ್ಟಣ್ಣ ಚೆಟ್ಟಿ ಪುರಭವನ ಬಾಡಿಗೆ ದರ ಪರಿಷ್ಕರಣೆ: 2022 ಸೆಪ್ಟೆಂಬರ್ 01 ರಿಂದ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರವನ್ನು ಪರಿಷ್ಕರಿಸಿದೆ.

ಅದರಂತೆ, ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000 ರೂ. ಹಾಗೂ ನಾನ್ ಎಸಿ (Non Air Conditioner)ಗೆ 60,000 ರೂ. ನಿಗದಿಪಡಿಸಲಾಗಿತ್ತು. ಇದೀಗ ದರ ಪರಿಷ್ಕರಿಸಿದ್ದು, ಪೂರ್ತಿ ದಿನಕ್ಕೆ ಎ.ಸಿಗೆ 60,000 ರೂ. ಹಾಗೂ ನಾನ್ ಎ.ಸಿಗೆ 50,000 ದರ ನಿಗದಿಪಡಿಸಲಾಗಿದ್ದು, ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌.

ಅಲ್ಲದೆ, ಮೊದಲಾರ್ಧ ದಿನ(ಬೆಳಗ್ಗೆ 8.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ) ಹಾಗೂ ದ್ವಿತಿಯಾರ್ಧ ದಿನ(ಮಧ್ಯಾಹ್ನ 3.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿಗೆ 30,000 ಹಾಗೂ ನಾನ್ ಎ.ಸಿಗರ 25,000 ರೂ. ದರ ನಿಗದಿಪಡಿಸಿದ್ದು, ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌.

ಕನ್ನಡ ರಂಗಭೂಮಿಯ ಎಲ್ಲಾ ನಾಟಕ – ಪ್ರಸಂಗಗಳಿಗೆ ಹಾಗೂ ವಿಶೇಷ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಪರಿಷ್ಕೃತ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗುವುದು. ಪರಿಷ್ಕೃತ ದರಗಳು ಹಾಗೂ ರಿಯಾಯಿತಿ ಸೌಲಭ್ಯವು ಇದೇ “2022 ರ ಸೆಪ್ಟೆಂಬರ್ 1 ರಿಂದ” ಜಾರಿಗೆ ಬರಲಿದೆ.

ಕನ್ನಡ ರಂಗಭೂಮಿಗೆ ಬಿಬಿಎಂಪಿ ವತಿಯಿಂದ ಗೌರಿ-ಗಣೇಶ ಹಬ್ಬದ ಉಡುಗೊರೆ ನೀಡುತ್ತಿದ್ದು, ಬೆಂಗಳೂರಿನ ಸಾಂಸ್ಕೃತಿಕ ಹಾಗೂ ರಂಗಭೂಮಿ ಸಂಘಟನೆಗಳು ಪುರಭವನದ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಲು ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಕೋರಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ