Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯಬೆಂಗಳೂರು

KSRTC ನೌಕರರ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ : ಸಚಿವ ರಾಮಲಿಂಗಾರೆಡ್ಡಿ ಭರವಸೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಷ್ಕರದ ಕಾರಣ ನೀಡಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಕರ್ತವ್ಯದಿಂದ ವಜಾ ಮಾಡಿರುವ ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳಲು ಹಾಗೂ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಿಸಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯು ಸಂಬಂಧ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳ ಜತೆ ಚರ್ಚೆ ಮಾಡಲು ಸಮಯ ನಿಗದಿ ಮಾಡಿಕೊಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೂಟದ ವತಿಯಿಂದ ಮನವಿ ಮಾಡಲಾಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು (ಜೂನ್‌27) ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರಶೇಖರ್ ಮತ್ತು ಪದಾಧಿಕಾರಿಗಳು, ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ಮಾಡಿದೆವು.

ಅಂದರೆ ಕಳೆದ ಡಿಸೆಂಬರ್-2020 ರಂದು ಮತ್ತು ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಏಪ್ರಿಲ್-2021 ರಲ್ಲಿ ಸಾರಿಗೆ ಮುಷ್ಕರ ಮಾಡಿದ ಸಂದರ್ಭದಲ್ಲಿ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲು ಸಾರಿಗೆ ನೌಕರರಿಗೆ ವಜಾ, ಅಮಾನತು, ವರ್ಗಾವಣೆ ಹಾಗೂ ಸುಳ್ಳು ಪೊಲೀಸ್‌ ಪ್ರಕರಣಗಳನ್ನು ಸಿಬ್ಬಂದಿಗಳು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಿಸಿ ಮುಷ್ಕರವನ್ನು ಹತ್ತಿಕ್ಕಲಾಯಿತು.

ಇನ್ನು ಮುಷ್ಕರದ ಸಂದರ್ಭದಲ್ಲಿ ಮತ್ತು ನಂತರ ದಿನಗಳಲ್ಲಿ ತಮ್ಮನು ಹಾಗೂ ತಮ್ಮ ಪಕ್ಷದ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡ ಸಂದರ್ಭದಲ್ಲಿ ತಾವು ಮತ್ತು ತಮ್ಮ ಪಕ್ಷದ ಹಲವು ನಾಯಕರು ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಮಾಣಿಕ ಪ್ರಯತ್ನ ಮಾಡಿದ್ದೀರಿ. ಆದರೂ ಹಿಂದಿನ ಸರ್ಕಾರ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡಲಿಲ್ಲ.

ಹೀಗಾಗಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಮಂತ್ರಿ ಡಾ.ಜಿ. ಪರಮೇಶ್ವರ ಅವರನ್ನು ಹಾಗೂ ಇತರೆ ನಾಯಕರ ಬಳಿ ನಮ್ಮ ಕಷ್ಟಗಳನ್ನು ಹೇಳಿಕೊಂಡಾಗ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬಂದರೆ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಜೊತೆಗೆ ಹಿಂದಿನ ಸರ್ಕಾರದಲ್ಲಿ ಆಗಿರುವ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಡುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ.

ಇನ್ನು ತಾವು ಸಾರಿಗೆ ಸಚಿವರಾಗಿ ಆಧಿಕಾರ ಸ್ವೀಕರಿಸಿದ ನಂತರ ತಮನ್ನು ಭೇಟಿ ಮಾಡಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಾಗ ತಾವು ಈಗ ತಾನೇ ಆಧಿಕಾರ ಸ್ವೀಕಾರ ಮಾಡಿದ್ದು ಆದಷ್ಟು ಶೀಘ್ರವಾಗಿ ನಮ್ಮ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಡುವ ಭರವಸೆ ನೀಡಿದ್ದೀರಿ.

ಕಳೆದ ಎರಡೂವರೆ ವರ್ಷದಿಂದ ಕೆಲಸದಿಂದ ವಜಾಗೊಂಡ ನೌಕರರು ಜೀವನ ಸಾಗಿಸಲು ಮತ್ತು ನಮ್ಮ ಮಕ್ಕಳ ವಿದ್ಯಾಭ್ಯಾಸ ಮಾಡಿಸಲು ಪರದಾಡುವಂತ ಸನ್ನಿವೇಶ ನಿರ್ಮಾಣವಾಗಿದೆ. ಜೊತೆಗೆ ನಮ್ಮ ಹಾಗೂ ನಮ್ಮ ಕುಟುಂಬ ಸದಸ್ಯರ ಮೇಲೆ ದಾಖಲಿಸಿರುವ ಸುಳ್ಳು ಪೊಲೀಸ್‌ ಪ್ರಕರಣಗಳಿಗೆ ಕೋರ್ಟ್‌ಗಳನ್ನು ಸುತ್ತುವ ಮತ್ತು ಖರ್ಚುಗಳು ಬೇರೆ.

ಈಗಾಗಲೇ ಗೃಹಮಂತ್ರಿಗಳನ್ನು ಮತ್ತು ಕಾನೂನು ಸಚಿವರನ್ನು ಭೇಟಿ ಮಾಡಿದಾಗ ತಾವು ಸಾರಿಗೆ ನೌಕರರ ಮೇಲೆ ದಾಖಲಿಸಿರುವ ಪೊಲೀಸ್‌ ಕೇಸ್‌ಗಲನ್ನು ಹಿಂಪಡೆಯಲು ಗೃಹ ಮತ್ತು ಕಾನೂನು ಸಚಿವರಿಗೆ ಪತ್ರ ಬರೆದರೆ ಕೂಡಲೇ ಎಲ್ಲ ಪೊಲೀಸ್‌ ಕೇಸ್‌ಗಳನ್ನು ಹಿಂಡಯಬಹುದು ಎಂದು ತಿಳಿಸಿದ್ದಾರೆ.

ಆದರಿಂದ ತಾವು ಸಾರಿಗೆ ನೌಕರರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರು. ದಯವಿಟ್ಟು ನಾಲ್ಕು ಸಾರಿಗೆ ನಿಗಮಗಳಲ್ಲಿ ಮುಷ್ಕರದ ಕಾರಣದಿಂದ ವಜಾ ಮಾಡಲಾಗಿರುವ ನೌಕರರನ್ನು ಕೂಡಲೇ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಲು, ಪೊಲೀಸ್‌ಪ್ರಕರಣಗಳನ್ನು ಹಿಂಪಡೆಯಲು ಹಾಗೂ ಮುಷ್ಕರದ ಕಾರಣದಿಂದ ಸಂಸ್ಥೆಯಿಂದ ನೀಡಿರುವ ಶಿಕ್ಷದೇಶಗಳನ್ನು ರದ್ದು ಪಡಿಸಿ 06/04/2021 ರ ಪೂರ್ವದ ಯಥಸ್ಥಿತಿಗೆ ತರಲು ಕೂಟದ ಪದಾಧಿಕಾರಿಗಳ ಜತೆ ಚರ್ಚೆ ಮಾಡಲು ಸಮಯ ನಿಗದಿ ಮಾಡಿಕೊಡುವಂತೆ ಸಮಸ್ತ ಸಾರಿಗೆ ನೌಕರರ ಪರವಾಗಿ ಮನವಿ ಸಲ್ಲಿಸಿದರು.

ಕೂಟದ ಪದಾಧಿಕಾರಿಗಳು ಸಲ್ಲಿಸಿದ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಶೀಘ್ರದಲ್ಲೇ ಸಭೆ ಕರೆದು ಚರ್ಚಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...