CrimeNEWSದೇಶ-ವಿದೇಶನಮ್ಮರಾಜ್ಯ

ಮಾನನಷ್ಟ ಮೊಕದ್ದಮೆ ಪ್ರಕರಣ: ನಾಳೆ ಬೆಂಗಳೂರಿನ ವಿಶೇಷ ಕೋರ್ಟ್​ಗೆ ಹಾಜರಾಗಲಿದ್ದಾರೆ ರಾಹುಲ್ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಜೂ.7ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಲಿದ್ದಾರೆ.

ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚಿಸಿ ಪ್ರಕರಣವನ್ನು ಮುಂದೂಡಿತ್ತು.

ಈ ನಡುವೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ಗೆ ಜೂನ್ 1ರಂದು ಜಾಮೀನು ಮಂಜೂರು ಮಾಡಿದ್ದ ವಿಶೇಷ ನ್ಯಾಯಾಲಯವು ಜೂನ್ 7 ರಂದು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ತಾಕೀತು ಮಾಡಿತ್ತು.

ಇನ್ನು ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ನಾಲ್ಕನೇ ಆರೋಪಿಯಾಗಿದ್ದಾರೆ. ಕೆಪಿಸಿ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮೊದಲ ಮೂವರು ಆರೋಪಿಗಳಾಗಿದ್ದಾರೆ.

ಪ್ರಕರಣವೇನು?: ಈ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಂದಿನ ಆಡಳಿತಾರೂಢ ರಾಜ್ಯ ಬಿಜೆಪಿಯನ್ನು ಭ್ರಷ್ಟ ಎಂದು ಲೇಬಲ್ ಮಾಡುವ ಜಾಹೀರಾತುಗಳನ್ನು ಪ್ರಕಟಿಸಿತ್ತು. 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೋರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

2023 ರ ಮೇ 5 ರಂದು ಕಾಂಗ್ರೆಸ್ ದಿನಪತ್ರಿಕೆಗಳಲ್ಲೂ ಜಾಹೀರಾತುಗಳನ್ನು ನೀಡಿತ್ತು. ಅದರಲ್ಲಿ, ಬಿಜೆಪಿ ಸರ್ಕಾರ ಕೋವಿಡ್ ಕಿಟ್ ಟೆಂಡರ್ ಡೀಲ್‌ಗಳಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಟೆಂಡರ್‌ಗಳಿಗೆ ಶೇಕಡಾ 40, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಮತ್ತು ಇತರ ವ್ಯವಹಾರಗಳಿಗೆ ಶೇಕಡಾ 30 ರಷ್ಟು ಕಮಿಷನ್ ಪಡೆದಿದೆ ಎಂದು ಆರೋಪಿಸಿತ್ತು.

ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಕೇಶವ ಪ್ರಸಾದ್ ಅವರು 2023 ರ ಮೇ 8 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡು, 2024 ರ ಮಾರ್ಚ್ 11 ರಂದು ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿತ್ತು.

ಆರಂಭದಲ್ಲಿ ರಾಹುಲ್ ಗಾಂಧಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಲೋಕಸಭೆ ಚುನಾವಣೆಯ ಕಾರಣದಿಂದ ಹಾಜರಾಗಲು ಸಾಧ್ಯವಿಲ್ಲ ಮತ್ತು ಜೂನ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಕೋರಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...