CRIMENEWSನಮ್ಮರಾಜ್ಯ

ಸ್ವತಃ ರಾಯ್ ಅವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ (Confident Group) ಸಂಸ್ಥಾಪಕ, ಮಾಲೀಕ ಡಾ. ಸಿ.ಜೆ.ರಾಯ್ (CJ Roy) ಅವರು ನಿನ್ನೆ ಆತ್ಮಹತ್ಯೆ ಮಾಡಿಕೊಂಡು ಸಂಬಂಧದ ಪ್ರಕರಣದ ಒಂದೊಂದು ಅಂಶಗಳು ಹೊರಬೀಳುತ್ತಿವೆ.

ಘಟನಾ ಸ್ಥಳವನ್ನು ಕೂಲಂಕಶವಾಗಿ ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಸ್ವತಃ ರಾಯ್ ಅವರೇ ಗುಂಡು ಹಾರಿಸಿಕೊಂಡಿದ್ದಾರೆ ಎಂಬುವುದು ದೃಢವಾಗಿದೆ. ತನಿಖೆಯ ಪ್ರಕಾರ, ಸಿ.ಜೆ.ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತಿಳಿದು ಬಂದಿದೆ.

ಪಾಕೆಟ್ ಗನ್‌ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ.

ಇನ್ನು ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್‌ನ್ನು ಹೊರತೆಗೆದು, ಎಫ್‌ಎಸ್‌ಎಲ್‌ಗೆ ರವಾನಿಸಿದ್ದಾರೆ. ಬುಲೆಟ್‌ಗೆ ಯಾವುದೇ ಸ್ಕ್ರ‍್ಯಾಚ್ ಆಗದಂತೆ ಕಾರ್ಬನ್‌ನಲ್ಲಿ ಸುತ್ತಿ ರವಾನೆ ಮಾಡಲಾಗಿದೆ. ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ಖಚಿತವಾಗಿದೆ.

ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ (FSL) ಕಳುಹಿಸಲಾಗಿದೆ. ಒಟ್ಟಾರೆ ಸಾವಿರಾರು ಕೋಟಿ ರೂಪಾಯಿಯ ಉದ್ಯಮ ಸ್ಥಾಪಿಸಿ ಸಾವಿರಾರು ಜನರಿಗೆ ಕೆಲಸ ಕೊಟ್ಟಿದ ವ್ಯಕ್ತಿಯ ಅಂತ್ಯ ಈ ರೀತಿ ಆಗುತ್ತದೆ ಎಂದರೆ ನಮ್ಮ ಸರ್ಕಾರಗಳು, ಅಧಿಕಾರಿಗಳು ಇವರಿಗೆ ಎಷ್ಟು ಒತ್ತಡ ಹೇರಿರಬಹುದು ಎಂಬುದನ್ನು ನಿದರ್ಶಿಸುತ್ತಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ