Breaking NewsNEWS

ರಾಯಚೂರು: ಎಚ್ಚೆತ್ತ ಸಾರಿಗೆ ಅಧಿಕಾರಿಗಳು – ಖಾಸಗಿ ವಾಹನಗಳಿಗೆ ಕಡಿವಾಣ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಇಲ್ಲಿನ ಸಾರಿಗೆ ಬಸ್ ನಿಲ್ದಾಣದ ಒಳಗೇ ಖಾಸಗಿ ವಾಹನಗಳ ದರ್ಬಾರ್ ಜೋರಾಗಿದ್ದು, ಪ್ರಯಾಣಿಕರನ್ನು ಬಸ್‌ನಿಲ್ದಾಣದೊಳಕ್ಕೇ ಬಂದು ರಾಜಾರೋಷವಾಗಿ ಹತ್ತಿಸಿಕೊಂಡು ಹೋಗುತ್ತಿದ್ದಾರೆ ಎಂದು ವಿಜಯಪಥ ಆನ್‌ಲೈನ್‌ ಸುದ್ದಿಮಾಧ್ಯಮಲ್ಲಿ ವರದಿ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಖಾಸಗಿ ವಾಹನಗಳಿಗೆ ಕಡಿವಾಣ ಹಾಕಿದ್ದಾರೆ.

ಇತಿಹಾಸದಲ್ಲೇ ಈ ರೀತಿ ಸಾರಿಗೆ ಬಸ್‌ ನಿಲ್ದಾಣಕ್ಕೆ ಖಾಸಗಿ ವಾಹನಗಳು ಬರುತ್ತಿರುವುದು ಇದೇ ಮೊದಲು. ಹೀಗಿದ್ದರೂ ಅಧಿಕಾರಿಗಳು ಖಾಸಗಿ ವಾಹನಗಳನ್ನು ತಡೆಯುವಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಳೆದ ಜನವರಿ 30ರಂದು KKRTC: ರಾಯಚೂರು ಬಸ್‌ ನಿಲ್ದಾಣದೊಳಗೆ ಖಾಸಗಿ ವಾಹನಗಳ ದರ್ಬಾರ್‌ – ಕಂಡು ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳು ಎಂಬ ಶೀರ್ಷಿಕೆಯಡಿ ವರದಿ ಮಾಡಲಾಗಿತ್ತು.

ಇದನ್ನೂ ಓದಿ : KKRTC: ರಾಯಚೂರು ಬಸ್‌ ನಿಲ್ದಾಣದೊಳಗೆ ಖಾಸಗಿ ವಾಹನಗಳ ದರ್ಬಾರ್‌ – ಕಂಡು ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳು

ಇದು ಅಧಿಕಾರಗಳ ನಿರ್ಲಕ್ಷ್ಯವಾಗಿದ್ದು, ಹೇಳುವವರು ಕೇಳುವವರು ಇಲ್ಲದಂತಾಗಿದೆ. ಅಧಿಕಾರಿಗಳ ಈ ನಡೆಯಿಂದ ಖಾಸಗಿಯವರಿಗೆ ಹಬ್ಬವಾಗಿದ್ದು ಸಾರಿಗೆ ಬಸ್‌ಗಳ ಆದಾಯಕ್ಕೆ  ಕತ್ತರಿ ಬೀಳುತ್ತಿದೆ ಎಂದು ವಿವರಿಸಲಾಗಿತ್ತು.

ಈ ಎಲ್ಲವನ್ನು ಗಮನಿಸಿದ ರಾಯಚೂರು ವಿಭಾಗದ ಸಾರಿಗೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಖಾಸಗಿ ವಾಹನಗಳು ಬಸ್‌ನಿಲ್ದಾಣದೊಳಗೆ ಬಂದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ವಿಜಯಪಥದಲ್ಲಿ ವರದಿ ಮಾಡಿ ಗಮನ ಸೆಳೆದಿದ್ದಕ್ಕೆ ಅಭಿನಂದನೆ ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ