NEWSಕೃಷಿನಮ್ಮರಾಜ್ಯ

ಬೆಂಗಳೂರಿನಲ್ಲಿ ಮುಂಜಾನೆ ವರುಣನ ಸಿಂಚನ, ಸಂಜೆ ಬಿರುಗಾಳಿ ಸಹಿತ ಅಬ್ಬರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಳೆರಾಯ ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ತಂಪೆರೆಯುತ್ತಿದ್ದಾನೆ. ಇಂದು (ಮೇ 8) ಮುಂಜಾನೆ ಸಹ ರಾಜಧಾನಿಯ ಹಲವೆಡೆ ಮಳೆಯಾಗಿತ್ತು. ಮತ್ತೆ ಇದೀಗ ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದೆ.

ಕುಮಾರಸ್ವಾಮಿ ಬಡಾವಣೆ, ಯಲಹಂಕ, ರಿಚ್​ಮಂಡ್​ಟೌನ್ ಸುತ್ತಮುತ್ತ ಹಾಗೂ ನೆಲಮಂಗಲ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್. ಸರ್ಕಲ್, ಶಾಂತಿ ನಗರ, ಎಂ.ಜಿ.ರಸ್ತೆ , ಕೆ.ಆರ್.​ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನಸೌಧ ಸುತ್ತಮುತ್ತ ಧಾರ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಇನ್ನು ಸಂಜೆ ಮಳೆಯಾಗುತ್ತಿರುವುದರಿಂದ ಕೆಲಸ ಮುಗಿಸಿ ಮನೆ ಕಡೆ ಹೊರಟ ವಾಹನ ಸವಾರರು ಪರದಾಡುತ್ತಿದ್ದಾರೆ. ಸದ್ಯಕ್ಕೆ ಈಗ ಸಿಲಿಕಾನ್ ಸಿಟಿ ಥಂಡಾ ಥಂಡಾ ಕೂಲ್ ಕೂಲ್ ಆಗಿದ್ದು, ಬಿಸಿ‌ ಹವೆ ಹಾಗೂ ಬೇಸಿಗೆಯಿಂದ ಬೇಸತ್ತಿದ್ದ ಜನ ಫುಲ್‌ ಖುಷ್ ಆಗಿದ್ದಾರೆ.

ಸದಾಶಿವನಗರ, ಹೆಬ್ಬಾಳ, ಅರಮನೆ ಮೈದಾನ, ಮಲ್ಲೇಶ್ವರಂ, ಶಿವಾನಂದ ಸರ್ಕಲ್,‌ ಮಂತ್ರಿ ಮಾಲ್, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್ ಬಳಿಯೂ ಜೋರು ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹೆಬ್ಬಾಳ, ಅರಮನೆ ಮೈದಾನ ಬಳಿ ಸಂಚಾರ ದಟ್ಟಣೆಯಾಗಿದೆ.

ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗೆ ವರುಣ ಮೂರ್ನಾಲ್ಕು ದಿನಗಳಿಂದ ಕೃಪೆ ತೋರುತ್ತಿದ್ದಾನೆ. ಇದರಿಂದ ಬೆಂಗಳೂರಿಗರು ಕೊಂಚ ರಿಲೀಫ್‌ ಆಗಿದ್ದಾರೆ. ಅಲ್ಲದೇ ಇಷ್ಟು ದಿನ ಬಿರು ಬಿಸಿಲಿನಿಂದ ಕಂಗಾಲಾಗಿದ್ದವರು ಬೀಳುತ್ತಿರುವ ಮಳೆಗೆ ಮೈಯೊಡ್ಡಿ ಎಂಜಾಯ್ ಮಾಡುತ್ತಿದ್ದಾರೆ.

ಇನ್ನೂ ಒಂದು ವಾರ ಉತ್ತಮ ಮಳೆ: ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನು, ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು