ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ರಾತ್ರಿ ಇಡೀ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಹಲವು ಕಡೆ ಸಮಸ್ಯೆಯಾಗಿದ್ದು, ಬಿಬಿಎಂಪಿ ಅಧಿಕಾರಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ನಗರದಲ್ಲಿ ನಿನ್ನೆ ರಾತ್ರಿ 10 ಗಂಟೆಯಿಂದ ಇಂದು ಮುಂಜಾನೆ 6 ಗಂಟೆಯವರೆಗೆ ಸರಾಸರಿ 66 ಮಿ.ಮೀ ಮಳೆಯಾಗಿದೆ. ಅತಿ ಹೆಚ್ಚು ಕೆಂಗೇರಿಯಲ್ಲಿ 132 ಮಿ.ಮೀ, ಅತೀ ಕಡಿಮೆ ಗೊಟ್ಟಿಗೆರೆಯಲ್ಲಿ 32 ಮಿ.ಮೀ ಮಳೆಯಾಗಿದ್ದು, ನಗರದಲ್ಲಿ ವಲಯವಾರು ಮಳೆಯಾಗಿರುವ ವಿವರಗಳು ದಾಖಲಿಸಲಾಗಿದೆ.
ಮಹದೇವಪುರ ವಲಯ: * ಮಹದೇವಪುರ ವಲಯದಲ್ಲಿ ಸುಮಾರು 10 ಕಡೆ ಜಲಾವೃತವಾಗಿದ್ದು, ಪ್ರಮುಖವಾಗಿ ಸಾಯಿ ಲೇಔಟ್ ಪ್ರದೇಶವು ಸಂಪೂರ್ಣ ಜಲಾವೃತವಾಗಿದೆ. 6 ಟ್ರ್ಯಾಕ್ಟರ್, 2 ಜೆ.ಸಿ.ಬಿ, 35 ಸಿಬ್ಬಂದಿಗಳು, 3 ಅಗ್ನಿ ಶಾಮಕ ವಾಹನ, ಎಸ್.ಡಿ.ಆರ್.ಎಫ್ ತಂಡದಿಂದ 2 ಬೋಟ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಸ್ಥಳೀಯ ನಿವಾಸಿಗಳಿಗೆ ಉಪಾಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.
* ಮಾರತ್ತಹಳ್ಳಿಯ ದೀಪ ನರ್ಸಿಂಗ್ ಹೋಮ್, ಚಿನ್ನಪ್ಪನಹಳ್ಳಿ 5ನೇ ಕ್ರಾಸ್, ಪಣತ್ತೂರ್ ರೈಲ್ವೆ ಕೆಳಸೇತುವೆ, ಗ್ರೀನ್ ಹುಡ್, ಇಬ್ಬಲೂರು ಜಂಕ್ಷನ್, ಬಾಲಾಜಿ ಲೇಔಟ್ – ಕೊತ್ತನೂರು, ಎ. ನಾರಾಯಣಪುರದ ಕೃಷ್ಣ ನಗರ, ಸುನೀಲ್ ಲೇಔಟ್, ಹರಳೂರು, ಬಿ.ಎಸ್.ಪಿ ಲೇಔಟ್‌ನ ಕಸವನಹಳ್ಳಿ ಕಡೆಗಳಲ್ಲಿ ರಸ್ತೆಗಳ ಮಲೆ ನೀರು ಮತ್ತು ಮನೆಗಳಿಗೆ ನೀರು ನುಗ್ಗಿದೆ. ಪಾಲಿಕೆ ಸಿಬ್ಬಂದಿ ಈಗಾಗಲೇ ಕಾರ್ಯಾಚರಣೆ ನಡೆಸಿ ಬಹುತೇಕ ಕಡೆ ಸಮಸ್ಯೆ ಬಗೆಹರಿಸಿದ್ದಾರೆ.
ಪೂರ್ವ ವಲಯ: * ರಾಜಕಾಲುವೆಯಲ್ಲಿ ನೀರು ತುಂಬಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಎಚ್.ಬಿ.ಆರ್ 5, 6, 7, 8ನೇ ಬ್ಲಾಕ್, ಬೈರಸಂದ್ರ ಲೇಔಟ್, ಕೆಂಪೇಗೌಡ ರಸ್ತೆ, ಕಾಮರಾಜ ನಗರ ಪ್ರದೇಶಗಳು ಜಲಾವೃತವಾಗಿವೆ. ನೀರು ಹೊರ ಹಾಕಲು ನಿರ್ವಹಣಾ ತಂಡಗಳು, 6 ಶಿಲ್ಟ್ & ಟ್ರ್ಯಾಕ್ಟರ್ ಗಳ ತಂಡಗಳು, 2 ಜೆ.ಸಿ.ಬಿ ಗಳು ಹಾಗೂ 10 ಪಂಪ್ ಗಳ ವ್ಯವಸ್ಥೆ ಮಾಡಿ ನೀರನ್ನು ಹೊರಹಾಕುವ ಕೆಲಸ ಮಾಡಲಾಗುತ್ತಿದೆ.
ಬೊಮ್ಮನಹಳ್ಳಿ ವಲಯ: * ಎಚ್.ಎಸ್.ಆರ್ ಲೇಔಟ್ 6 ಮತ್ತು 7ನೇ ಸೆಕ್ಟರ್ ಮತ್ತು ಬನ್ನೇರುಘಟಟ್ಟ ಬಿಳೇಕಲ್ಲಹಳ್ಳಿ ಸಿಗ್ನಲ್ ನ ರಸ್ತೆಯಲ್ಲಿ ನೀರು ನಿಂತಿರುವುದು, ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿರುವುದನ್ನು ನಿರ್ವಹಣಾ ತಂಡ ಹಾಗೂ ಪಂಪ್‌ಗಳ ವ್ಯವಸ್ಥೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ.

ದಕ್ಷಿಣ ವಲಯ: * ಕೆ-100, ಕೆ-200 ಬೃಹತ್ ನೀರುಗಾಲುವೆಗಳು ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಗಲೀಕರಣ ಕಡಿಮೆ ಇರುವ ಪರಿಣಾಮ ನಿರಿನ ಹರಿವಿನ ಮಟ್ಟ ಹೆಚ್ಚಾಗಿ ಮಡಿವಾಳ ಡಾಲರ್ಸ್ ಕಾಲೋನಿ, ಕೋರಮಂಗಲದ 6ನೇ ಬ್ಲಾಕ್, ಈಜೀಪುರ ಪ್ರದೇಶಗಳು ಜಲಾವೃತವಾಗಿದೆ. ಈ ಸಂಬಂಧ ಬೆಳ್ಳಂದೂರು ಬಳಿ ಮಳೆ ನೀರಿನ ಹರಿವಿನ ಮಟ್ಟವನ್ನು ಕಡಿಮೆ ಮಾಡಲು ತಾತ್ಕಾಲಿಕವಾಗಿ ಜೆಸಿಬಿ ಮೂಲಕ ಬಂಡ್ ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ಅನುವು ಮಾಡಲಾಗಿದ್ದು, ಈ ಪ್ರದೇಶಗಳಲ್ಲಿ ಜಲಾವೃತ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ.
* ವೃಷಭಾವತಿ ವ್ಯಾಲಿ ಗಾಳಿ ಆಂಜನೇಯ ದೇವಸ್ಥಾನದ ಬಳಿ ಜಲಾವೃತವಾಗಿ ಮನೆಗಳಿಗೆ ನೀರು ನುಗ್ಗಿದ್ದು, ಸಮಸ್ಯೆ ಬಗೆಹರಿಸಲಾಗಿದೆ.
ಯಲಹಂಕ ವಲಯ: * ಚೌಡೇಶ್ವರಿ ನಗರದ ಅಟ್ಟೂರು ವ್ಯಾಪ್ತಿಯಲ್ಲಿ ಸುಮಾರು 15 ಮನೆಗಳಿಗೆ, ಡಿಫೆನ್ಸ್ ಲೇಔಟ್ ಹಾಗೂ ದ್ವಾರಕಾ ನಗರದಲ್ಲಿ ಸುಮಾರು 5 ಮನೆಗಳಿಗೆ ನೀರು ನುಗ್ಗಿದ್ದು, ಸದರಿ ಸ್ಥಳಗಳಲ್ಲಿ ಪಂಪ್ ಗಳನ್ನು ಅಳವಡಿಸಿ ನೀರು ತೆರವು ಮಾಡಲಾಗಿದೆ. ಇನ್ನು ಟಾಟಾ ನಗರ ಮುಖ್ಯರಸ್ತೆಯಲ್ಲಿ ನಿಂತಿದ್ದ ನೀರನ್ನು ತೆರವುಗೊಳಿಸಲಾಗಿದೆ.
ರಾಜಾರಾಜೇಶ್ವರಿ ನಗರ ವಲಯ: * ಐಡಿಯಲ್ಸ್ ಹೋಮ್ಸ್ 1ನೇ ಎ ಕ್ರಾಸ್ ವೃಷಭಾವತಿ ವ್ಯಾಲಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ 3 ಹಸು, 1 ಕರು ಹಾಗೂ 1 ಎಮ್ಮೆ ಸೇರಿ 5 ಜಾನುವಾರಗಳು ಮೃತಪಟ್ಟಿರುತ್ತವೆ. ಅಲ್ಲದೆ ಸುಮಾರು 12 ಮನೆಗಳಿಗೆ ನೀರು ನುಗ್ಗಿದ್ದು, ಸೈಡ್ ಡೈನ್ ಗಳನ್ನು ಸ್ವಚ್ಚಗೊಳಿಸಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ.
* ವಿಜಯಶ್ರೀ ಬಡವಾಣೆ ಹೆಮ್ಮಿಗೆಪುರ ರಾಜಕಾಲುವೆಯಲ್ಲಿ ನೀರು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಜಲಾವೃತವಾಗಿದ್ದು, ಪಾಲಿಕೆಯ ತಂಡ ನಿಯೋಜಿಸುವ ಮಾಡಿ ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಂಗೇರಿ ಬಳಿಯ ಕೋಟೆ ಲೇಔಟ್ ನಲ್ಲಿ ಸುಮಾರು 100 ಮನೆಗಳಿಗೆ ನಿರು ನುಗ್ಗಿದ್ದು, 4 ಪಂಪ್‌ಗಳನ್ನು ಅಳವಡಿಸಿ ನೀರು ತೆರವು ಕಾರ್ಯ ಮಾಡಲಾಗುತ್ತಿದೆ.
ದಾಸರಹಳ್ಳಿ ವಲಯ: * ಕೆ.ಜಿ ಹಳ್ಳಿ, ಡಿಫೆನ್ಸ್ ಕಾಲೋನಿ, ಮೇಡರಹಳ್ಳಿಯ ಶ್ರೀದೇವಿ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನೀರನ್ನು ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ರುಕ್ಮಿಣಿ ನಗರ, ವಿದ್ಯಾನಗರ, ಬಿ.ಟಿ.ಎಸ್ ಲೇಔಟ್ ಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಪಂಪ್‌ಗಳನ್ನು ಅಳವಡಿಸಿ ನೀರು ತೆರವುಗೊಳಿಸಲಾಗಿದೆ.
ಪಶ್ಚಿಮ ವಲಯ: * ಕೆ.ಪಿ ಅಗ್ರಹಾರದಲ್ಲಿ ರಾಜಕಾಲುವೆಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿ 20 ಮನೆಗಳಿಗೆ ನೀರು ನುಗ್ಗಿದ್ದು, ಸದರಿ ಪ್ರದೇಶದಲ್ಲಿ 4 ಪಂಪ್‌ಗಳನ್ನು ಅಳವಡಿಸಿ ನೀರು ತೆರವು ಕಾರ್ಯ ಮಾಡಲಾಗುತ್ತಿದೆ.
ಧರೆಗುರುಳಿದ ಮರಗಳ ತೆರವು ಕಾರ್ಯಾಚರಣೆ: * ನಗರದಲ್ಲಿ ಧರೆಗುರುಳಿದ ಮರಗಳು, ರೆಂಬೆ/ಕೊಂಬೆಗಳು ತೆರವುಗೊಳಿಸಲು 30 ತಂಡಗಳನ್ನು ನಿಯೋಜಿಸಲಾಗಿದ್ದು, ರಾತ್ರಿ ಸುರಿದ ಮಳೆಯಿಂದಾಗಿ 27 ಮರಗಳು, 43 ಮರದ ರೆಂಬೆ/ಕೊಂಬೆಗಳು ಧರೆಗುರುಳಿದ್ದು, ಈಗಾಗಲೇ ಬಹುತೇಕ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸಲಾಗಿದೆ.
ನಾಗರಿಕರು ಸಹಾಯವಾಣಿ 1533 ಗೆ ಕರೆ ಮಾಡಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ನಾಗರಿಕರು ಕೂಡಲೇ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅದಲ್ಲದೆ ಪಾಲಿಕೆ ಕೇಂದ್ರ ಕಛೇರಿ ಹಾಗೂ 8 ವಲಯಗಳಲ್ಲಿರುವ ನಿಯಂತ್ರಣ ಕೊಠಡಿಗಳ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಲು ಕೋರಿದೆ.
ಯಲಹಂಕ ವಲಯದ ಎಲ್ಲ ಕೆರೆಗಳು ಭರ್ತಿ: ಯಲಹಂಕ ವಲಯ ವ್ಯಾಪ್ತಿಯಲ್ಲಿ 29 ಕೆರೆಗಳು ಬರಲಿದ್ದು, ಎಲ್ಲಾ ಕೆರೆಗಳು ಕೂಡ ಸಂಪೂರ್ಣವಾಗಿ ತುಂಬಿರುತ್ತವೆ. ಇನ್ನು ಪ್ರಮುಖವಾಗಿ ಚೌಡೇಶ್ವರಿ ಲೇಔಟ್ ವ್ಯಾಪ್ತಿಯಲ್ಲಿ 103 ಮಿ.ಮೀ ಮಳೆಯಾಗಿದ್ದರೂ ಕೂಡ ಕೇಂದ್ರೀಯ ವಿಹಾರ್ ಅಪಾರ್ಟ್ಮ್ಂಟ್ ನಲ್ಲಿ ಈ ಬಾರಿ ಯಾವುದೇ ರೀತಿಯ ಸಮಸ್ಯೆ ಆಗಿರುವುದಿಲ್ಲ. ರಮಣಶ್ರೀ ಕ್ಯಾಲಿಫೋರ್ನಿಯಾ ವ್ಯಾಪ್ತಿಯಲ್ಲಿಯೂ ಯಾವುದೇ ಜಲಾವೃತವಾಗಿರುವುದಿಲ್ಲ.
ವಲಯವಾರು ಹೆಚ್ಚು ಮಳೆಯಾಗಿರುವ ಪ್ರದೇಶಗಳ ವಿವರ:
* ರಾಜರಾಜೇಶ್ವರಿ ನಗರ ವಲಯದ ಕೆಂಗೇರಿಯಲ್ಲಿ 132 ಮಿ.ಮೀ
* ಯಲಹಂಕ ವಲಯದ ಚೌಡೇಶ್ವರಿ ನಗರದಲ್ಲಿ 103 ಮಿ.ಮೀ
* ದಕ್ಷಿಣ ವಲಯದ ಕೋರಮಂಗಲದಲ್ಲಿ 96 ಮಿ.ಮೀ
* ಮಹದೇವಪುರ ವಲಯದ ಎಚ್.ಎ.ಎಲ್ ವ್ಯಾಪ್ತಿಯಲ್ಲಿ 93 ಮಿ.ಮೀ.
* ದಾಸರಹಳ್ಳಿ ವಲಯದ ಬಾಗಲಗುಂಟೆ ವ್ಯಾಪ್ತಿಯಲ್ಲಿ 89 ಮಿ.ಮೀ
* ಪಶ್ಚಿಮ ವಲಯ ಕಾಟನ್ ಪೇಟೆ ವ್ಯಾಪ್ತಿಯಲ್ಲಿ 89 ಮಿ.ಮೀ
* ಪೂರ್ವ ವಲಯದ ಬಾಣಸವಾಡಿ ವ್ಯಾಪ್ತಿಯಲ್ಲಿ 85 ಮಿ.ಮೀ
* ಬೊಮ್ಮನಹಳ್ಳಿ ವಲಯದ ಎಚ್.ಎಸ್.ಆರ್ ಲೇಔಟ್ ನಲ್ಲಿ 73 ಮಿ.ಮೀ
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್‌ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...