ಬೆಂಗಳೂರು: ರಾಜ್ಯದ ಹಲವೆಡೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರ ವಹಿಸಬೇಕಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿ ಸಹಿತ ಗಂಟೆಗೆ 40-50 ಕಿಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ, ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ.
ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ಐದು ದಿನಗಳವರೆಗೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ.
ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿ ಸಹಿತ ಗಂಟೆಗೆ 40-50 ಕಿಮೀ ವೇಗದಲ್ಲಿ, ಜತೆಗೆ ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.