ಜೈಪುರ: 14ರ ಪೋರ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್ ಸ್ಫೋಟಕ ಶತಕದ ಜೊತೆಯಾಟ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿರುವ ಗುಜರಾತ್ ಟೈಟಾನ್ಸ್ 12 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.
ನಗರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಗುಜರಾತ್ ತಂಡ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿತು. ಗೆಲುವಿಗೆ 210 ರನ್ಗಳ ಗುರಿ ಪಡೆದ ರಾಜಸ್ಥಾನ್ 15.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅಬ್ಬರದ ಆಟವಾಡಿದರು. ಮೊದಲ ವಿಕೆಟ್ಗೆ ಈ ಜೋಡಿ 71 ಎಸೆತಗಳಲ್ಲಿ ಸ್ಫೋಟಕ 166 ರನ್ಗಳ ಜೊತೆಯಾಟ ನೀಡಿತು.
14 ವರ್ಷದ ವೈಭವ್ ಕೇವಲ 35 ಬಾಲ್ಗಳಿಗೆ ಸೆಂಚುರಿ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಯಶಸ್ವಿ ಜೈಸ್ವಾಲ್ 40 ಬಾಲ್ಗಳಿಗೆ 70 ರನ್ ಗಳಿಸಿದರೇ, ನಾಯಕ ರಿಯಾನ್ ಪರಾಗ್ 15 ಎಸೆತಗಳಿಗೆ 32 ರನ್ ಗಳಿಸಿ ಅಜೇಯರಾಗಿ ಉಳಿದರು.
ಗುಜರಾತ್ ಪರ ಆರಂಭಿಕ ಆಟಗಾರರಾಗಿ ನಾಯಕ ಶುಭಮನ್ಗಿಲ್ ಹಾಗೂ ಸಾಯಿ ಸುದರ್ಶನ್ ಫೀಲ್ಡಿಗಿಳಿದು 62 ಬಾಲ್ಗಳಿಗೆ 93 ರನ್ಗಳಿಸಿ ಉತ್ತಮ ಜೊತೆಯಾಟವಾಡಿದರು. ಬಳಿಕ ಸುದರ್ಶನ್ 30 ಎಸೆತಗಳಿಗೆ 39 ರನ್ಗಳಿಸಿ ಔಟಾದರು.
ಬಳಿಕ ಜೊತೆಯಾದ ಗಿಲ್ ಹಾಗೂ ಜೋಶ್ ಬಟ್ಲರ್ 38 ಎಸೆತಗಳಿಗೆ 74 ರನ್ಗಳ ಕಲೆ ಹಾಕಿ ತಂಡವನ್ನು ಮುನ್ನಡೆಸಿದರು. ನಾಯಕ ಗಿಲ್ 50 ಬಾಲ್ಗಳಲ್ಲಿ 4 ಸಿಕ್ಸರ್ ಹಾಗೂ 5 ಫೋರ್ ಸಿಡಿಸಿ 84 ರನ್ಗಳಿಸಿ ಶತಕದ ಹೊಸ್ತಿಲಲ್ಲಿ ವಿಕೆಟ್ ಒಪ್ಪಿಸಿದರು. ಬಟ್ಲರ್ 26 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಅಜೇಯರಾಗಿ ಉಳಿದರು.
ರಾಜಸ್ಥಾನ ಪರ ತೀಕ್ಷಣ 2 ವಿಕೆಟ್ ಕಿತ್ತರೆ ಜೋಫ್ರಾ ಆರ್ಚರ್ ಮತ್ತು ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...