NEWSಕ್ರೀಡೆ

ರಾಜಸ್ಥಾನ್‌ ರಾಯಲ್ಸ್‌ ತಂಡದ “ವೈಭವ” ಹೆಚ್ಚಿಸಿದ ಭರ್ಜರಿ ಗೆಲುವು

ವಿಜಯಪಥ ಸಮಗ್ರ ಸುದ್ದಿ

ಜೈಪುರ: 14ರ ಪೋರ ವೈಭವ್‌ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್‌ ಸ್ಫೋಟಕ ಶತಕದ ಜೊತೆಯಾಟ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌ ತಂಡ ಗುಜರಾತ್‌ ಟೈಟಾನ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿರುವ ಗುಜರಾತ್‌ ಟೈಟಾನ್ಸ್‌ 12 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.

ನಗರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಗುಜರಾತ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿತು. ಗೆಲುವಿಗೆ 210 ರನ್‌ಗಳ ಗುರಿ ಪಡೆದ ರಾಜಸ್ಥಾನ್‌ 15.5‌ ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅಬ್ಬರದ ಆಟವಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 71 ಎಸೆತಗಳಲ್ಲಿ ಸ್ಫೋಟಕ 166 ರನ್‌ಗಳ ಜೊತೆಯಾಟ ನೀಡಿತು.

14 ವರ್ಷದ ವೈಭವ್ ಕೇವಲ 35 ಬಾಲ್‌ಗಳಿಗೆ ಸೆಂಚುರಿ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಯಶಸ್ವಿ ಜೈಸ್ವಾಲ್ 40 ಬಾಲ್‌ಗಳಿಗೆ 70 ರನ್ ಗಳಿಸಿದರೇ, ನಾಯಕ ರಿಯಾನ್ ಪರಾಗ್ 15 ಎಸೆತಗಳಿಗೆ 32 ರನ್ ಗಳಿಸಿ ಅಜೇಯರಾಗಿ ಉಳಿದರು.

ಗುಜರಾತ್ ಪರ ಆರಂಭಿಕ ಆಟಗಾರರಾಗಿ ನಾಯಕ ಶುಭಮನ್‌ಗಿಲ್ ಹಾಗೂ ಸಾಯಿ ಸುದರ್ಶನ್ ಫೀಲ್ಡಿಗಿಳಿದು 62 ಬಾಲ್‌ಗಳಿಗೆ 93 ರನ್‌ಗಳಿಸಿ ಉತ್ತಮ ಜೊತೆಯಾಟವಾಡಿದರು. ಬಳಿಕ ಸುದರ್ಶನ್ 30 ಎಸೆತಗಳಿಗೆ 39 ರನ್‌ಗಳಿಸಿ ಔಟಾದರು.

ಬಳಿಕ ಜೊತೆಯಾದ ಗಿಲ್ ಹಾಗೂ ಜೋಶ್ ಬಟ್ಲರ್ 38 ಎಸೆತಗಳಿಗೆ 74 ರನ್‌ಗಳ ಕಲೆ ಹಾಕಿ ತಂಡವನ್ನು ಮುನ್ನಡೆಸಿದರು. ನಾಯಕ ಗಿಲ್ 50 ಬಾಲ್‌ಗಳಲ್ಲಿ 4 ಸಿಕ್ಸರ್ ಹಾಗೂ 5 ಫೋರ್ ಸಿಡಿಸಿ 84 ರನ್‌ಗಳಿಸಿ ಶತಕದ ಹೊಸ್ತಿಲಲ್ಲಿ ವಿಕೆಟ್ ಒಪ್ಪಿಸಿದರು. ಬಟ್ಲರ್ 26 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಅಜೇಯರಾಗಿ ಉಳಿದರು.

ರಾಜಸ್ಥಾನ ಪರ ತೀಕ್ಷಣ 2 ವಿಕೆಟ್ ಕಿತ್ತರೆ ಜೋಫ್ರಾ ಆರ್ಚರ್ ಮತ್ತು ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...