NEWSದೇಶ-ವಿದೇಶರಾಜಕೀಯ

ಮಾ.31ಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರ‍್ಯಾಲಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದದೆ. ಈ ಸಂಬಂಧ ಮಾರ್ಚ್​ 31ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿ ನಡೆಸಲಾಗುತ್ತಿದೆ ಎಂದು ಎಎಪಿ ಹಾಗೂ ಕಾಂಗ್ರೆಸ್ ಜಂಟಿ ಘೋಷಣೆ ಮಾಡಿವೆ.

INDIA ಒಕ್ಕೂಟದ ಎಎಪಿ ಹಾಗೂ ಕಾಂಗ್ರೆಸ್​ ಇಂದು ದೆಹಲಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ನಾಯಕ ಗೋಪಾಲ್​ ರೈ, ಸದ್ಯ ಪ್ರಜಾಪ್ರಭುತ್ವ ಮತ್ತು ದೇಶ ಎರಡು ಅಪಾಯದಲ್ಲಿವೆ. ಹೀಗಾಗಿ ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳು ಈ ಮಹಾ ರ‍್ಯಾಲಿಯನ್ನು ಹಮ್ಮಿಕೊಂಡಿವೆ ಎಂದು ಹೇಳಿದರು.

ಇನ್ನು ದೇಶದಲ್ಲಿ ಸರ್ವಾಧಿಕಾರ ಸರ್ಕಾರವಿದ್ದು ಪ್ರಜಾಪ್ರಭುತ್ವವನ್ನು ಬದಿಗೊತ್ತಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಸುಳ್ಳು ಕೇಸ್​ಗಳನ್ನು ದಾಖಲಿಸಿ ವಿಪಕ್ಷದವರನ್ನು ಬಂಧಿಸಲಾಗುತ್ತಿದೆ. ಪ್ರಧಾನಿ ಮೋದಿ ಸರ್ಕಾರಿ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದರು.

ದೆಹಲಿಯ ಕಾಂಗ್ರೆಸ್​ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತನಾಡಿ, ಈ ಪ್ರತಿಭಟನೆ ರಾಜಕೀಯಕ್ಕಾಗಿ ಅಥವಾ ಯಾವುದೇ ಪಕ್ಷಕ್ಕಾಗಿ ಮಾಡುತ್ತಿಲ್ಲ. ದೇಶ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಾಗಿ ಮಾಡಲಾಗುತ್ತಿದೆ. ಈ ಮಹಾರ‍್ಯಾಲಿ ಕೇಂದ್ರ ಸರ್ಕಾರದ ವಿರುದ್ಧ ಎಂದು ಹೇಳಿದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ