ರಾಮನಗರ: ನಗರದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ರಾಯರದೊಡ್ಡಿ, ರಾಮನಗರ ಇಲ್ಲಿ ಅಂತಾರಾಷ್ಟ್ರೀಯ ಮುಟ್ಟಿನ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಮೇ 27ರಂದು ಹಮ್ಮಿಕೊಳ್ಳಲಾಗಿದೆ.
ಕೃಷ್ಣಾಪುರದೊಡ್ಡಿಯ ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಎಸ್‌ಎಎಫ್ ಇಂಡಿಯಾ, ಲೀವಬಲ್ ಸಿಟೀಸ್ ಪ್ರಾಜೆಕ್ಟ್ ಇಂಡಿಯಾ, ಹ್ಯುಮಾನಿಟಿ ಫಸ್ಟ್ ಫೌಂಡೇಷನ್-ಕರ್ನಾಟಕ ಹಾಗೂ ರಾಮನಗರ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ಸಂಯುಕ್ತವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಮನಗರ ಮಾಜಿ ನಗರ ಸಭಾಧ್ಯಕ್ಷೆ ಬಿ.ಸಿ. ಪಾರ್ವತಮ್ಮ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಪ್ರಾಂಶುಪಾಲರಾದ ಪ್ರೊ. ಮುದ್ದೀರಯ್ಯ ಅಧ್ಯಕ್ಷತೆ ವಹಿಸುವರು. ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಪದ್ಮರೇಖ ಮುಟ್ಟಿನ ಆರೋಗ್ಯ ಜಾಗೃತಿ ಕುರಿತು ಉಪನ್ಯಾಸ ನೀಡುವರು.
ಕಾಲೇಜು ಮಹಿಳಾ ಸಬಲೀಕರಣ ಸಮಿತಿ ಸಂಚಾಲಕಿ, ಪ್ರೊ. ವೇದಾವತಿ, ಜಾನಪದ ವಿದ್ವಾಂಸ ಡಾ. ಎಂ.ಬೈರೇಗೌಡ, ಹ್ಯುಮಾನ್ಯಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಉದಯಕುಮಾರ್ ಅತಿಥಿಗಳಾಗಿ ಪಾಲ್ಗೊಳ್ಳುವರು.