ರಾಮನಗರ: ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ ಬಳಿಕ ತಾಯಿ-ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್ನಲ್ಲಿ ನಡೆದಿದೆ.
ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ತಾಯಿ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಇತ್ತ ತಾನೂ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.