CrimeNEWSನಮ್ಮಜಿಲ್ಲೆ

ಓವರ್ ಟೇಕ್ ಮಾಡಲು ಹೋದ ಓಮಿನಿ ಹಿಂದಿನಿಂದ ಲಾರಿಗೆ ಡಿಕ್ಕಿ: ನಾಲ್ವರ ಸಾವು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ಓಮಿನಿ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ವೇನಲ್ಲಿ ದುರ್ಘಟನೆ ಸಂಭವಿಸಿದ್ದು, ಮೃತರಲ್ಲಿ ಇಬ್ಬರು ಮಹಿಳೆಯರು ಕೂಡ ಇದ್ದಾರೆ. ಓಮಿನಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನು ಓಮಿನಿಯಲ್ಲಿ ಒಂದು ಮಗು ಸೇರಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ಜಿಲ್ಲಾಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು