NEWSನಮ್ಮಜಿಲ್ಲೆನಮ್ಮರಾಜ್ಯ

ರಾಮನಗರ: ಬೆಂ.ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಂಜುನಾಥ್ ಅವರಿಗೆ ಅವರ ಪತ್ನಿ ಅನುಸೂಯ, ಎಂ.ಕೃಷ್ಣಪ್ಪ ಹಾಗೂ ಚಿಂತಕಿ ಸುಧಾ ಬರಗೂರು ಸಾಥ್ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ, ಅಶ್ವಥ್ ನಾರಾಯಣ್, ಮುನಿರತ್ನ ಹಾಗೂ ಡಾ.ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲು ತಡವಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೆರವಣಿಗೆ ರದ್ದು ಮಾಡಿ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಾರ್ಯಕರ್ತರ ಉತ್ಸಾಹ ನೋಡಿದರೆ, ಗೆಲುವು ಖಚಿತ ಎನ್ನಿಸುತ್ತಿದೆ. ಅಮಿತ್ ಶಾ ಕೂಡಾ ಆಗಮಿಸಿ ನನ್ನ ಪರ ರೋಡ್ ಶೋ ಮಾಡಿದ್ದಾರೆ. ಇದರಿಂದ ನಮ್ಮ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಹೃದಯ ಒಂದಾಗಿದೆ ಎಂದರು.

ಇನ್ನು ನನ್ನ ಗೆಲುವಿಗಾಗಿ ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಮತದಾರರು ಯಾವುದೇ ತಂತ್ರ, ಕುತಂತ್ರಕ್ಕೆ ಮಣೆ ಹಾಕುವುದಿಲ್ಲ. ಜನ ಬುದ್ಧಿವಂತರಿದ್ದಾರೆ, ಆಮೀಷಗಳಿಗೆ ಬಲಿಯಾಗದೇ ನನ್ನನ್ನ ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಾ.ಮಂಜುನಾಥ್ ಒಳಗೆ ಹೋಗುತ್ತಿದ್ದಂತೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಬಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಡಾ.ಮಂಜುನಾಥ್, ಅಶ್ವಥ್ ನಾರಾಯಣ್, ಮುನಿರತ್ನ ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. ಬಳಿಕ ಅವರನ್ನು ನೋಡಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಕಾರ್‌ನಿಂದ ಹೊರ ಬಂದು ಕೈ ಮುಗಿದು ಕನ್ನಡ ಬಾವುಟ ತೋರಿಸಿ ಹೋಗಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ