CrimeNEWSನಮ್ಮಜಿಲ್ಲೆ

ಅತ್ಯಾಚಾರಿ ಆರೋಪಿಗೆ 10 ವರ್ಷ ಶಿಕ್ಷೆ: ತೀರ್ಪು ನೀಡಿದ ಮೈಸೂರು ಜಿಲ್ಲಾ ನ್ಯಾಯಾಲಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರವೆಸಗಿದ ಆರೋಪಿಗೆ 10 ವರ್ಷಗಳ ಕಠಿಣ ಸೆರೆಮನೆ ವಾಸ ಹಾಗೂ 35 ಸಾವಿರ ರೂ., ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ಸಲ್ಮಾನ್ ಖಾನ್(20) ಶಿಕ್ಷೆಗೆ ಗುರಿಯಾದವ. ಈತ ಅದೇ ಗ್ರಾಮದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದರಿಂದ, ಸಂತ್ರಸ್ತೆ ಗಂಭಿರ್ಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ನಂತರ ಆರೋಪಿ ಮದುವೆಗೆ ನಿರಾಕರಿಸಿ ಮೋಸ ಮಾಡಿದ್ದರಿಂದ, ಈ ಬಗ್ಗೆ ಸಂತ್ರಸ್ತೆ ಆರೋಪಿಯ ವಿರುದ್ಧ ದೂರು ಸಲ್ಲಿಸಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿಯಾಗಿದ್ದ ಕೆ.ಸಿ.ಪೂವಯ್ಯ ಅವರು, ತನಿಖೆ ಪೂರೈಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ಬಗ್ಗೆ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಚಾರಣೆ ನಡೆಸಿ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೂರಕ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಎಂ.ರಮೇಶ್ ಆರೋಪಿಗೆ ಕಲಂ. 376(2) (ಎನ್) ಐಪಿಸಿ ರೀತ್ಯಾ 10 ವರ್ಷಗಳ ಕಠಿಣ ಸೆರೆಮನೆ ವಾಸ ಮತ್ತು 30 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ.

ಅಲ್ಲದೆ ಕಲಂ 417 ಐಪಿಸಿ ರೀತ್ಯಾ ಒಂದು ವರ್ಷಗಳ ಸಾದಾ ಸೆರೆಮನೆ ವಾಸ ಮತ್ತು 5 ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ, ದಂಡ ಮೊತ್ತದ 35 ಸಾವಿರ ರೂಪಾಯಿಗಳ ಪೈಕಿ 30 ಸಾವಿರ ರೂಪಾಯಿಗಳನ್ನು ಸಂತ್ರಸ್ತೆಗೆ ಪರಿಹಾರವನ್ನಾಗಿ ನೀಡುವಂತೆ, 5 ಸಾವಿರ ರೂಪಾಯಿಗಳನ್ನು ಸರ್ಕಾರಕ್ಕೆ ದಂಡ ಪಾವತಿಸುವಂತೆ ಆದೇಶ ಮಾಡಿದ್ದಾರೆ.

ಇನ್ನು ಸಂತ್ರಸ್ತೆಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನಾತ್ಮಕ ಪರಿಹಾರ ನೀಡುವಂತೆ ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕೆ.ನಾಗರಾಜ ವಾದ ಮಂಡಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ