CRIMENEWSನಮ್ಮರಾಜ್ಯ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬೇಲ್‌ ಅರ್ಜಿ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ – ಇಂದು ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ 2ನೇ ಬಾರಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಇಂದಿಗೆ ತೀರ್ಪು ಕಾಯ್ದಿರಿಸಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ಪ್ರಜ್ವಲ್‌ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಅರ್ಜಿ ಸಂಬಂಧ ಗುರುವಾರ ನಡೆದ ವಿಚಾರಣೆಗೆ ಹಾಜರಾದ ಸಿಐಡಿಯ ಎಸ್‌ಐಟಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.

ಇದಕ್ಕೂ ಮುನ್ನ ಆರೋಪಿ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಪ್ರಜ್ವಲ್‌ ಬಂಧನವಾಗಿ 14 ತಿಂಗಳು ಕಳೆದಿದೆ. ಇದೇ ಪ್ರಕರಣದ ಆರೋಪಿ ಎಚ್‌.ಡಿ.ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ಹೀಗಾಗಿ ಪ್ರಜ್ವಲ್‌ಗೂ ಜಾಮೀನು ನೀಡುವಂತೆ ಕೋರಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್‌ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್‌ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದು, ಆ ಅರ್ಜಿ ವಿಚಾರಣೆ ನಿನ್ನೆ ನಡೆದಿದ್ದು, ಇಂದು ಆದೇಶ ಹೊರಬೀಳಲಿದೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ