ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ ಅಂಡ್ ಮರ್ಡರ್ ಮಾಡಿದ್ದ ಆರೋಪಿಯ ಗುರುತನ್ನು ಎರಡೇ ದಿನಗಳಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.
ಬಾಲಕಿಯ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಸಿಕ್ಕಿತ್ತು. ಈ ಹಿನ್ನೆಲೆ ಇದು ರೇಪ್ ಅಂಡ್ ಮರ್ಡರ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು.
ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು ಬಂದಿವೆ. ಬುಧವಾರ ತಡರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತೆಯ ಹತ್ಯೆಯಾಗಿದೆ.
ಇನ್ನು ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ಎರಡು ಮರ್ಡರ್ ಆದಂತಾಗಿದೆ. ಎರಡು ದಿನಗಳ ಹಿಂದೆ ಇದೇ ಜಾಗದಲ್ಲಿ ರೌಡಿ ಶೀಟರ್‌ನ ಸಹರ್ವತಿಯ ಬರ್ಬರ ಹತ್ಯೆ ಆಗಿತ್ತು. ಅದೇ ಜಾಗದಲ್ಲಿ ನೆನ್ನೆ ರಾತ್ರಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ.
ಸದ್ಯ ವಿಚಾರಣೆಗಾಗಿ ವ್ಯಾಪಾರಕ್ಕೆ ಆಗಮಿಸಿದ್ದ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನ ಪೊಲೀಸರು ಕರೆದೊಯ್ದಿದ್ದಾರೆ. ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಲೆ ಆರೋಪಿ ಗುರುತು ಪತ್ತೆ: ಘಟನೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣಾ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ.

ರೆಡ್ ಶರ್ಟ್, ಜೀನ್ಸ್ ಪ್ಯಾಂಡ್ ಧರಸಿದ್ದ ಕೊಲೆ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ಕೃತ್ಯ ಎಸಗುವ ವೇಳೆ ಆರೋಪಿ ಕಾಲಿಗೆ ಚಪ್ಪಲಿ ಕೂಡ ಧರಿಸಿರಲಿಲ್ಲ ಎಂಬುದೂ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ತಿಳಿದು ಬಂದಿದೆ..
ಫೋಟೋ ಲಭ್ಯವಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದಾರೆ. ಆರೋಪಿ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂದು ಗುರುತಿಸಿದ್ದಾರೆ.
ಈತ 2 ವರ್ಷ ಜೈಲು ವಾಸ ಅನುಭವಿಸಿದ್ದು, 4 ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಜತೆಗೆ ಊರು ಸೇರದೇ ಎಲ್ಲೆಂದರಲ್ಲಿ ಕುಡಿದು ಅಲೆಯುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
Related
