CRIMENEWSನಮ್ಮಜಿಲ್ಲೆಮೈಸೂರು

10 ವರ್ಷದ ಬಾಲಕಿ ಮೇಲೆ ರೇಪ್ -ಮರ್ಡರ್: ಆರೋಪಿ ಗುರುತು ಪತ್ತೆಹಚ್ಚಿದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ ಅಂಡ್ ಮರ್ಡರ್ ಮಾಡಿದ್ದ ಆರೋಪಿಯ ಗುರುತನ್ನು ಎರಡೇ ದಿನಗಳಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.

ಬಾಲಕಿಯ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಸಿಕ್ಕಿತ್ತು. ಈ ಹಿನ್ನೆಲೆ ಇದು ರೇಪ್ ಅಂಡ್ ಮರ್ಡರ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು.

ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು ಬಂದಿವೆ. ಬುಧವಾರ ತಡರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತೆಯ ಹತ್ಯೆಯಾಗಿದೆ.

ಇನ್ನು ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ಎರಡು ಮರ್ಡರ್ ಆದಂತಾಗಿದೆ. ಎರಡು ದಿನಗಳ ಹಿಂದೆ ಇದೇ ಜಾಗದಲ್ಲಿ ರೌಡಿ ಶೀಟರ್‌ನ ಸಹರ್ವತಿಯ ಬರ್ಬರ ಹತ್ಯೆ ಆಗಿತ್ತು. ಅದೇ ಜಾಗದಲ್ಲಿ ನೆನ್ನೆ ರಾತ್ರಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ.

ಸದ್ಯ ವಿಚಾರಣೆಗಾಗಿ ವ್ಯಾಪಾರಕ್ಕೆ ಆಗಮಿಸಿದ್ದ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನ ಪೊಲೀಸರು ಕರೆದೊಯ್ದಿದ್ದಾರೆ. ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಲೆ ಆರೋಪಿ ಗುರುತು ಪತ್ತೆ: ಘಟನೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ನಜರಬಾದ್‌ ಠಾಣಾ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ.

ರೆಡ್‌ ಶರ್ಟ್‌, ಜೀನ್ಸ್‌ ಪ್ಯಾಂಡ್‌ ಧರಸಿದ್ದ ಕೊಲೆ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ಕೃತ್ಯ ಎಸಗುವ ವೇಳೆ ಆರೋಪಿ ಕಾಲಿಗೆ ಚಪ್ಪಲಿ ಕೂಡ ಧರಿಸಿರಲಿಲ್ಲ ಎಂಬುದೂ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ತಿಳಿದು ಬಂದಿದೆ..

ಫೋಟೋ ಲಭ್ಯವಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದಾರೆ. ಆರೋಪಿ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂದು ಗುರುತಿಸಿದ್ದಾರೆ.

ಈತ 2 ವರ್ಷ ಜೈಲು ವಾಸ ಅನುಭವಿಸಿದ್ದು, 4 ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಜತೆಗೆ ಊರು ಸೇರದೇ ಎಲ್ಲೆಂದರಲ್ಲಿ ಕುಡಿದು ಅಲೆಯುತ್ತಿದ್ದ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ