CrimeNEWSನಮ್ಮರಾಜ್ಯ

ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಅಪರಹರಣ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ಕೂಡ ವಿಧಿಸಿರುವ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿತು.

ಏನಿದು ಪ್ರಕರಣ? ಪ್ರಜ್ವಲ್​ ರೇವಣ್ಣ ಅವರದ್ದು ಎಂದು ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್.​​ ನಗರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು.

ಈ ವೇಳೆ ಎಚ್.​ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.​ಡಿ. ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.

ಸದ್ಯ ರೇವಣ್ಣ ಅವರಿಗೆ ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು ಜಾಮೀನಿನ ಮೇಲೆ ಅವರು ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು.

ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ