CrimeNEWSನಮ್ಮಜಿಲ್ಲೆ

ಅಣ್ಣನಿಂದಲೇ ಅತ್ಯಾಚಾರ: ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ತಂಗಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ : ನಿರಂತರವಾಗಿ ತನ್ನ ದೊಡ್ಡಪ್ಪನ ಮಗನಿಂದಲೇ ಅತ್ಯಾಚಾರಕ್ಕೆ ಒಳಗಾದ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ.

ಇತ್ತ ಈ ಕೃತ್ಯ ನಡೆದಿರುವುದು ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನಿಂದಲೇ ಎಂಬ ವಿಚಾರ ಬಾಲಕಿಯ ಹೆತ್ತವರಿಗೆ ಭಾರಿ ಆಘಾತವನ್ನುಂಟು ಮಾಡಿದ್ದು, ಕಂಗಾಲಾಗಿದ್ದಾರೆ.

ಘಟನೆ ವಿವರ: ಚಿಕ್ಕಪ್ಪನ ಮಗಳಾದ ಸದ್ಯ ಗಂಡು ಮಗುವಿಗೆ ಜನ್ಮ ನೀಡಿರುವ ಬಾಲಕಿ ವಸತಿ ಶಾಲೆಯಲ್ಲಿ ಓದುತ್ತಿದ್ದಾಳೆ. ಈ ನಡುವೆ ರಜೆ ಇದ್ದಾಗ ಮನೆಗೆ ಬರುತ್ತಿದ್ದಳು. ಇದರ ದುರುಪಯೋಗ ಪಡಿಸಿಕೊಂಡಿದ್ದು, ಬಾಲಕಿ ಮನೆಗೆ ಬಂದಾಗ ಸಹೋದರರೇ ಆಕೆಯನ್ನು ಬಳಸಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

ಅದು ಕೂಡ ರಾತ್ರಿ ವೇಳೆ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಅಣ್ಣ, ತಂಗಿ ಅನ್ನೋದು ನೋಡದೇ ಅತ್ಯಾಚಾರ ಎಸಗುತ್ತಿದ್ದ. ಹೀಗೆ ಆತ ಹಲವು ಬಾರಿ Rape ಮಾಡಿದ್ದಾನೆ ಎಂನ್ನಲಾಗಿದೆ. ಅಲ್ಲದೇ ಈ ವಿಚಾರ ಬಾಯಿಬಿಟ್ಟರೆ ಕೊಲೆ ಮಾಡಿಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗುತ್ತಿದೆ.

ಕಳೆದ 2023ರ ಡಿ. 24ರಂದು ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಬಳಿಕ ಆಕೆಯನ್ನು ತಂದೆತಾಯಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆಕೆಗೆ ಹೊಟ್ಟೆನೋವು ಹೆಚ್ಚಾಗಿದ್ದರಿಂದ ಆಕೆಯನ್ನು ಮಹಾರಾಷ್ಟ್ರದ (Maharashtra) ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ವೇಳೆ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸದ್ಯ ಅಣ್ಣನನ್ನು ಕೂಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ