NEWSನಮ್ಮರಾಜ್ಯಸಂಸ್ಕೃತಿ

ರಾಷ್ಟ್ರಕವಿ ಕುವೆಂಪು ಸಮಾಜದ ಅಸಮಾನತೆ ಅಳಿಸಲು ಶ್ರಮಿಸಿದರು: ಅಭಿಲಾಷ್ ಗೌಡ

ವಿಜಯಪಥ ಸಮಗ್ರ ಸುದ್ದಿ

ಹನೂರು: ರಾಷ್ಟ್ರಕವಿ ಕುವೆಂಪು ಅವರು ಕವಿತೆ, ಕವನಗಳ ಮೂಲಕ ಸಮಾಜದ ಅಸಮಾನತೆಯನ್ನು ಅಳಿಸಿ ಹಾಕಲು ಶ್ರಮಿಸಿದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಷ್ ಗೌಡ ಅಭಿಪ್ರಾಯಪಟ್ಟರು.

ಗುರುವಾರ ಪಟ್ಟಣದಲ್ಲಿ ಒಕ್ಕಲಿಗ ಯುವಕರ ಬಳಗ ಹಾಗೂ ಆಟೋ ಚಾಲಕರ ಸಮ್ಮುಖದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸಿ‌ ಗೌರವ ಅರ್ಪಿಸಿ ಮಾತನಾಡಿದರು.

ಕುವೆಂಪು ಅವರನ್ನು ಒಂದು ಜಾತಿಗಷ್ಟೇ ಸೀಮಿತಗೊಳಿಸದೆ ಜಾತ್ಯತಿತವಾಗಿ ನೋಡಬೇಕು. ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕು ಅವರದಾಗಿತ್ತು. ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು.

ಪಟ್ಟಣ ಪಂಚಾಯಿತಿ ಉಪಾದ್ಯಕ್ಷ ಗಿರೀಶ್, ಮುಖಂಡರಾದ ಸಿದ್ದೇ ಗೌಡ, ಸಿದ್ದರಾಜು, ಸಿದ್ದರಾಜು, ಜಡೆಸ್ವಾಮಿ, ನಾರಾಯಣ್ ಪ್ರಭು ದೇಶೆಗೌಡ, ಸಲ್ಲು‌, ಮಂಜು ರಾಜು, ವೆಂಕಟೇಶ್, ಭರತ್ ಇತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ