CrimeNEWSನಮ್ಮರಾಜ್ಯಬೆಂಗಳೂರು

ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ಮಾಡಿ ಪಾರ್ಟಿ ಆಯೋಜಕ ವಾಸು ಸೇರಿ ಐವರನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಯಲ್ಲೇ ಇದ್ದ ಮೂವರು ಡ್ರಗ್ ಪೆಡ್ಲರ್ಸನ್ನು ಬಂಧಿಸಿರುವ ಪೊಲೀಸರು ಈ ವೇಳೆ ಫಾರ್ಮ್ ಹೌಸ್‌ನಲ್ಲಿದ್ದ 45 ಗ್ರಾಂ ಡ್ರಗ್ಸ್, ಎಂಡಿಎಂಎ, ಕೊಕೇನ್ ಸೇರಿ ಹಲವು ಬಗೆಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾರ್ಟಿಯಲ್ಲಿ ಇದ್ದ ಹಲವು ಕಿರುತೆರೆ ಕಲಾವಿದರು: ಪೊಲೀಸರ ದಾಳಿ ವೇಳೆ ರೇವ್ ಪಾರ್ಟಿಯಲ್ಲಿ 25 ಕ್ಕೂ ಹೆಚ್ಚು ಯುವತಿಯರು ಇದ್ದರು. ಅಷ್ಟು ಮಂದಿ ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಲ್ಲಿ ಕೆಲವರು ತೆಲುಗು ಸಿನಿರಂಗದ ಮತ್ತು ಕಿರುತೆರೆ ಕಲಾವಿದರು ಹಾಗೂ ಮಾಡಲ್ಸ್​ಗಳು ಇದ್ದಾರೆ ಎಂದು ತಿಳಿಸಿರುವ ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.

ನಿದ್ರೆ ಮಾಡಲು ಬಿಡಿ ಎಂದು ಪೊಲೀಸರಿಗೆ ನಟಿಯರ ಅವಾಜ್: ​ ಇನ್ನು ಕೆಲವು ಕಿರುತೆರೆ ನಟಿಯರು ಮತ್ತು ಮಾಡಲ್‌ಗಳು ನಶೆಯಲ್ಲಿರುವುದು ಪೊಲೀಸರಿಗೆ ಗೊತ್ತಾಗಿದೆ. ಈ ವೇಳೆ ಬಂಧಿಸುವಾಗ ನಮಗೆ ನಿದ್ದೆ ಮಾಡಲು ಸಮಯ ಬೇಕಿದೆ. ನಮಗೆ ತೊಂದರೆ ಮಾಡಬೇಡಿ ಎಂದು ಹೇಳುತ್ತಾ ಪೊಲೀಸರಿಗೇ ಅವಾಜ್ ಹಾಕಿರುವ ಘಟನೆಯೂ ನಡೆದಿದೆ.

ಪೊಲೀಸರ ವಶದಲ್ಲಿ 80ಕ್ಕೂ ಹೆಚ್ಚು ಜನರು: ದಾಳಿಯಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 50ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದು, ಈಗಲೂ ಮುಂದುವರಿದಿದೆ. ಮಾಹಿತಿ ಪ್ರಕಾರ 25ಕ್ಕೂ ಹೆಚ್ಚು ಯುವತಿಯರು ಹಾಗೂ 45 ಕ್ಕೂ ಹೆಚ್ಚು ಯುವಕರು ಸೇರಿ ಪಾರ್ಟಿಯಲ್ಲಿ 80ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು ಅಷ್ಟೂ ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ವಶದಲ್ಲಿರುವ ಎಲ್ಲರನ್ನೂ ವೈದ್ಯಕೀಯ ತಪಾಸಣೆ ಕರೆದೊಯ್ಯಲಿದ್ದು ಬಳಿಕ ತೀರ್ವ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನಿದ್ರೆಯಿಂದ ಇನ್ನು ಎದ್ದಿಲ್ಲ: ಸಿಸಿಬಿ ಪೊಲೀಸರು ತಡರಾತ್ರಿ 2:30ರ ಸುಮಾರಿಗೆ ದಾಳಿ ಮಾಡಿದ್ದಾರೆ. ಭಾನುವಾರ ಸಂಜೆ ಐದು ಗಂಟೆಯಿಂದ ರೇವ್ ಪಾರ್ಟಿ ಪ್ರಾರಂಭವಾಗಿದೆ. ಪೊಲೀಸರ ದಾಳಿ ವೇಳೆಗೆ ಕೆಲ ಮಾಡೆಲ್ಸ್ ಹಾಗೂ ನಟಿಯರು ನಿದ್ರೆಗೆ ಜಾರಿದ್ದರು. ನಶೆಯಲ್ಲಿರುವ ಇನ್ನು ಕೆಲವರು ನಿದ್ರೆಯಿಂದ ಎದ್ದಿಲ್ಲ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ