NEWSಕೃಷಿದೇಶ-ವಿದೇಶ

ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪಂಜಾಬ್, ಹರಿಯಾಣ ರೈತರ ಹೋರಾಟ ಎಂದು ಸಮಸ್ಯೆಗಳ ಪರಿಹಾರಕ್ಕೆ ಸರ್ವೋಚ್ಚ ನ್ಯಾಯಾಲಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಐದು ಜನ ಪರಿಣಿತರ ಸೇರಿಸಿ ಸಮಿತಿ ರಚಿಸಲಾಗಿದೆ ಈ ಸಮಿತಿಯಲ್ಲಿ ದಕ್ಷಿಣ ಭಾರತ ರಾಜ್ಯಗಳ ಪರಿಣಿತರನ್ನು ಸೇರಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ನಗರದ ಜಲದರ್ಶಿನಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರೈತರಿಗೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಆಗಬೇಕು ಎಂದು ಹೋರಾಟ ನಡೆಸಲಾಗುತ್ತಿದೆ. ಈ ಹೋರಾಟವನ್ನು ಇಡೀ ದೇಶದ ರೈತರು ಬೆಂಬಲಿಸಿ ಮುಂದುವರಿಸಿದ್ದಾರೆ. ಈಗ ರಚಿಸಿರುವ ಸಮಿತಿಯನ್ನು ಇಡೀ ದೇಶಕ್ಕೆ ಅನ್ವಯವಾಗುವಂತೆ ದಕ್ಷಿಣ ಭಾರತ ರಾಜ್ಯಗಳ ಪರಿಣಿತರನ್ನು ಸೇರಿಸಿ ಸಮಿತಿ ರಚಿಸಿ. ಈಗ ಹೂರಡಿಸಿರುವ ಆದೇಶ ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

(ಜಿಎಂ ಸೀಡ್ಸ) ಕುಲಾಂತರಿ ಬೀಜ ರೈತರ ಹಿತದೃಷ್ಟಿಯಿಂದ ರಾಜ್ಯ ಕೇಂದ್ರ ಸರ್ಕಾರಗಳು ಬಹಿಷ್ಕಾರ ಮಾಡಲಿ. ಖಾಸಗಿ ಫೈನಾನ್ಸ್ ಗಳು ಖಾಸಗಿ ಬ್ಯಾಂಕುಗಳ ಹಾವಳಿ. ಕಾನೂನುಬಾಹಿರ ಕಿರುಕುಳ ತಪ್ಪಿಸಲು ಕೂಡಲೇ ರಿಸರ್ವ್ ಬ್ಯಾಂಕ್ ಕಠಿಣ ನೀತಿ ರೂಪಿಸಬೇಕು. ರೈತರ ಕೃಷಿ ಸಾಲ ವಸೂಲಾತಿಗಾಗಿ ರೂಪಿಸಿರುವ ಸರ್ಪ್ರೈಸಿ ಕಾಯ್ದೆಯನ್ನು ರದ್ದುಗೊಳಿಸಬೇಕು ಈ ಬಗ್ಗೆ ರಾಜ್ಯದ ಸಂಸದರು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.

ಪ್ರಸಕ್ತ ಸಾಲಿನ ಹೆಚ್ಚುವರಿ ಕಬ್ಬುದರ ನಿಗದಿ, ಕಳೆದ ವರ್ಷದ 150 ಬಾಕಿ ಕೊಡಿಸಲು ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು. ಭತ್ತ ಉತ್ಪಾದನಾ ವೆಚ್ಚ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆಗೆ ಹೆಚ್ಚುವರಿ 500 ಪ್ರೋತ್ಸಾಹ ಧನ ನೀಡಬೇಕು ಎಂದರು.

ಇನ್ನು ಕೇರಳ ಹಾಗೂ ಒರಿಸ್ಸಾ ಮಾದರಿಯಲ್ಲಿ ರಾಜ್ಯದ ರೈತರ ಸಮಸ್ಯೆಗಳ ಕುರಿತು ಅಕ್ಟೋಬರ್‌ನಲ್ಲಿ ರಾಜ್ಯ ರೈತ ಸಮಾವೇಶ ನಡೆಸಲಾಗುತ್ತದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಬಲ್ಲೂರ್ ರವಿಕುಮಾರ್, ಮಂಜೇಶಗೌಡ, ಅಜೇಯ ಕುಮಾರ, ಧರ್ಮರಾಜ, ಅಯೂಬ್ ಖಾನ್, ನೆಲಮಂಗಲ ಜಗದೀಶ, ರವೀಶ, ಕೂಟ್ರೇಶ ಚೌಧರಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಸುಂದ್ರಪ್ಪ, ನೀಲಕಂಠಪ್ಪ ಮುಂತಾದವರು ಇದ್ದರು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...