NEWS

ದೆಹಲಿ ಮಾದರಿ ಗ್ಯಾರಂಟಿ ಈಡೇರಿಸಲು ಕಾಂಗ್ರೆಸ್‌ಗೆ ಸಂಪೂರ್ಣ ಸಹಾಯ ಹಸ್ತ ನೀಡಲು ಆಪ್ ಸಿದ್ಧ – ಬ್ರಿಜೇಶ್ ಕಾಳಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಮತ್ತು ಗ್ಯಾರಂಟಿಗಳು ಆಮ್ ಆದ್ಮಿ ಪಕ್ಷದ ಶೇ.90 ನಕಲು ಆಗಿದ್ದು, ಅವುಗಳನ್ನು ರಾಜ್ಯದ ಜನತೆಗೆ ಸಂಪೂರ್ಣವಾಗಿ ತಲುಪಿಸಲು ಕಾಂಗ್ರೆಸ್‌ಗೆ ಸಂಪೂರ್ಣ ಸಹಾಯ ಹಸ್ತ ನೀಡಲು ನಾವು ಸದಾ ಸಿದ್ಧರಿದ್ದೇವೆ ಎಂದು ಎಎಪಿ ರಾಜ್ಯ ಸಂವಹನ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ ಹೇಳಿದರು.

ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಿಜೇಶ್ ಕಾಳಪ್ಪ, ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಈಗಾಗಲೇ ಈಡೇರಿಸಿರುವ ಈ ಎಲ್ಲ ಭರವಸೆಗಳನ್ನು ಅನಧಿಕೃತವಾಗಿ ಉನ್ನತ ಅಧಿಕಾರಿಗಳನ್ನು ಆ ರಾಜ್ಯಗಳಿಗೆ ಕಳಿಸುವುದನ್ನು ಬಿಟ್ಟು ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರಿಗೆ ಪತ್ರ ಬರೆದರೆ ನಾವು ಸಂಪೂರ್ಣವಾಗಿ ನಿಮಗೆ ತಾಂತ್ರಿಕ ಸಹಾಯ ಹಸ್ತವನ್ನು ಮಾಡುತ್ತೇವೆ ಎಂದು ತಿಳಿಸಿದರು.

ಈ ಎಲ್ಲ ಭರವಸೆಗಳನ್ನು ಈಡೇರಿಸಲು ಆಮ್ ಆದ್ಮಿ ಪಕ್ಷದ ಪ್ರಾಮಾಣಿಕ ಪಾರದರ್ಶಕ ಆಡಳಿತ ಶೈಲಿಯಿಂದ ಮಾತ್ರ ಸಾಧ್ಯ, ಇವುಗಳನ್ನು ರೂಡಿಸಿಕೊಳ್ಳಲು ಕಾಂಗ್ರೆಸ್ ಪಕ್ಷವು ಕಾರ್ಯೋನ್ಮುಖವಾಗಬೇಕೆಂದು ತಿಳಿಸಿದರು.

ಕಾಂಗ್ರೆಸ್ ಪಕ್ಷವು ಇನ್ನು ಒಂದು ತಿಂಗಳಲ್ಲಿ ತಾನು ನೀಡಿರುವ ಗ್ಯಾರಂಟಿಗಳನ್ನು ಈಡೇರಿಸದಿದ್ದಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

ಇನ್ನು ಜನತೆಯಿಂದ ಸಂಪೂರ್ಣ ತಿರಸ್ಕರಿಸಲ್ಪಟ್ಟಿರುವ ಬಿಜೆಪಿ ಇಂದು ರಾಜ್ಯದ ಜನತೆಗೆ ಪ್ರಚೋದಿಸಿ ಗಲಾಟೆ ಮಾಡಿ ಎನ್ನುವ ಮೂಲಕ ಅಶಾಂತಿಯನ್ನು ಮೂಡಿಸಲು ಯತ್ನಿಸುತ್ತಿರುವುದು ಹೇಯಕರ ಎಂದು ಕಿಡಿಕಾರಿದರು.

ರೈತರ ಆದಾಯ ದ್ವಿಗುಣ, ಸರ್ವರಿಗೂ ವಸತಿ, ವಿದೇಶಗಳಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೂ 15ಲಕ್ಷ ರೂ.ಗಳು, ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡಿಕೆ, ಐದು ಟ್ರಿಲಿಯನ್ ಆರ್ಥಿಕತೆ ಬುಲೆಟ್ ಟ್ರೈನ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಸುವಲ್ಲಿ ವೈಫಲ್ಯ, ಬೆಲೆ ಏರಿಕೆಯಂತಹ ಯಾವುದೇ ಆಶ್ವಾಸನೆಗಳನ್ನು ಇದುವರೆಗೂ ಈಡೇರಿಸದೆ, ನೈತಿಕತೆ ಇಲ್ಲದೆ ಬಿಜೆಪಿಯವರು ಏಕಾಏಕಿ ರಾಜ್ಯದ ಶಾಂತಿಗೆ ಭಂಗ ತರುವ ರೀತಿಯಲ್ಲಿ ಅಶಾಂತಿಯನ್ನು ಮೂಡಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ ಕಾರ್ಯಾಧ್ಯಕ್ಷ ಶಿವರಾಯಪ್ಪ ಜೋಗಿನ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...