Vijayapatha - ವಿಜಯಪಥ > NEWS > ನಮ್ಮಜಿಲ್ಲೆ > ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ
ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ
DevaApril 29, 2024
ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂದು ಪುನರುಚ್ಚರಿಸಿದ್ದಾರೆ.
ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.
ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ತನಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದರು.
Related
Deva
Leave a reply