NEWSನಮ್ಮಜಿಲ್ಲೆನಮ್ಮರಾಜ್ಯ

ಶೀಘ್ರದಲ್ಲೇ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಂದೆರಡು ತಿಂಗಳ ಬಳಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ ಇಲಾಖೆ ಹಾಗೂ ಗೃಹ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಹಲವು ಹುದ್ದೆಗಳು ಖಾಲಿ ಇದ್ದರೂ ಸರಿಯಾಗಿ ನೇಮಕಾತಿ ಮಾಡುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಯೋಮಿತಿ ಮೀರುತ್ತಿರುವ ನಿರುದ್ಯೋಗಿ ಯುವಕರನ್ನೊಳಗೊಂಡಂತೆ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿತ್ತು.

ಈ ನಡುವೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಶೀಘ್ರದಲ್ಲೇ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಮಾಡುತ್ತೇವೆ. ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಳ ಕುರಿತು ನಿನ್ನೆ ಅಂದರೆ ಗುರುವಾರ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಪೊಲೀಸ್ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇವೆ. 2 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಪಿಎಸ್‌ಐ ನೇಮಕಾತಿ ನಡೆದಿದೆ. 900ಕ್ಕೂ ಹೆಚ್ಚು ಸಬ್‌ಇನ್ಸ್‌ಪೆಕ್ಟರ್‌ಗಳನ್ನು ನೇಮಕ ಮಾಡಲಾಗಿದೆ. ಅವರೆಲ್ಲ ತರಬೇತಿಯಲ್ಲಿದ್ದು ಒಂದೆರಡು ತಿಂಗಳಲ್ಲಿ ಬರುತ್ತಾರೆ. ಅವರು ಬಂದ ನಂತರ ಕಾನ್ಸ್ ಟೇಬಲ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ