NEWSಕೃಷಿನಮ್ಮಜಿಲ್ಲೆ

ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರ ರೈತರು

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಜಿಲ್ಲೆಯ ಟೊಮ್ಯಾಟೋ ಬೆಳೆಗಾರರ ಸ್ಥಿತಿ ಈಗ ‘ದೇವರಿಗೆ ಪ್ರೀತಿ’ ಎನ್ನುವಂತಾಗಿದೆ. ಕಳೆದ ವಾರವಷ್ಟೇ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 1000 ರಿಂದ 1200 ರೂಪಾಯಿ ಇತ್ತು. ಆದರೆ ಈಗ ಕೇವಲ 80 ರಿಂದ 100 ರೂಪಾಯಿಗೆ ಕುಸಿದಿದೆ.

ಅಂದರೆ, ಅಂದು ರಾಜನಂತೆ ಮಾರುಕಟ್ಟೆಗೆ ಹೋಗುತ್ತಿದ್ದ ರೈತ ಇಂದು ಸಾರಿಗೆ ವೆಚ್ಚವನ್ನೂ ಭರಿಸಲಾಗದ ಸ್ಥಿತಿಗೆ ತಲುಪಿದ್ದಾನೆ. ಟೊಮ್ಯಾಟೋ ಬೆಳೆಗಾರರು ಒಳ್ಳೆ ಬೆಲೆ ಬರುವ ಭರವಸೆಯೊಂದಿಗೆ ದಿನವೂ ಮಾರುಕಟ್ಟೆಗೆ ಬರುತ್ತಿದ್ದರು ಈಗ ಮತ್ತೆ ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ.

ಇತ್ತ ನಗರದಲ್ಲಿ ಟೊಮ್ಯಾಟೋ ಬೆಲೆ ಕುಸಿತದಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಪಕ್ಕದ ಮೈಸೂರಿನ ಎಪಿಎಂಸಿಯಲ್ಲಿರುವ ದರಕ್ಕಿಂತಲೂ ಕಡಿಮೆ ಬೆಲೆ ಸಿಗುತ್ತಿರುವುದನ್ನು ಖಂಡಿಸಿ, ಮೈಸೂರು ಎಪಿಎಂಸಿ ದರದಲ್ಲಿ ಖರೀದಿಸುವಂತೆ ಆಗ್ರಹಿಸಿದ್ದಾರೆ. ದಲ್ಲಾಳಿಗಳು ಈ ಬೇಡಿಕೆಗೆ ಒಪ್ಪದ ಕಾರಣ, ರೈತರು ಟೊಮ್ಯಾಟೋಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಹೊಸಪೇಟೆ ಸೇರಿದಂತೆ ಜಿಲ್ಲೆಯ ಹಲವೆಡೆ 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋ ಮಾರಾಟವಾಗುತ್ತಿದೆ. ಇದೇ ವಾರದ ಹಿಂದೆ ಒಳ್ಳೆ ಬೆಲೆಯಿದ್ದ ಟೊಮ್ಯಾಟೋ ಇದಿಗ ರೈತರ ಕಣ್ಣೀರಿಗೆ ಕಾರಣವಾಗಿದೆ. ಹೊಸಪೇಟೆ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ರೈತರು ಬೆಳೆದ ಫಸಲಿಗೆ ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲದಂತಾಗಿದ್ದು, ಸಂಕಷ್ಟಕ್ಕೀಡಾಗಿದ್ದಾರೆ.

ಟೊಮ್ಯಾಟೋ ಬೆಳೆಗೆ ಹಾಕಿದ ಬಂಡವಾಳ, ಕೂಲಿ ಆಳುಗಳ ಖರ್ಚು ಮತ್ತು ಸಾರಿಗೆ ವೆಚ್ಚ ಭರಿಸಲು ಆಗುತ್ತಿಲ್ಲ. ದಿನನಿತ್ಯ ಸಾಲ ಮಾಡಿ ಮಾರುಕಟ್ಟೆಗೆ ಟೊಮ್ಯಾಟೋ ತರುತ್ತಿರುವ ರೈತರಿಗೆ, ಮಾರುಕಟ್ಟೆಯಲ್ಲಿ ಸಿಗುತ್ತಿರುವ ಕನಿಷ್ಠ ಬೆಲೆಯು ಗಾಯದ ಮೇಲೆ ಬರೆ ಎಳೆದಂತಿದೆ.

ಇನ್ನು ಹೀಗೆ ಒಂದು ವಾರದಿಂದ ಬೆಲೆ ನಿರಂತರವಾಗಿ ಕುಸಿಯುತ್ತಿರುವುದು ರೈತರ ಪಾಲಿಗೆ ನಿದ್ದೆ ಇಲ್ಲದಂತೆ ಮಾಡಿದೆ. ಬೆಲೆ ಹೆಚ್ಚಿದ್ದಾಗ ನಮಗೆ ಫಸಲು ಕೈಸೇರಲಿಲ್ಲ, ಈಗ ಫಸಲು ಬಂದಾಗ ಬೆಲೆ ಇಲ್ಲ. ನಮ್ಮ ಕಷ್ಟ ಕೇಳುವವರೇ ಇಲ್ಲದಂತಾಗಿದೆ ಎಂದು ಜಿಲ್ಲೆಯ ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ