
ಬೆಂಗಳೂರು: ಮಚ್ಚು ಹಿಡಿದು ಮಾಡಿದ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿರುವ ಆರೋಪದ ಮೇರೆಗೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಬಸವೇಶ್ವರನಗರ ಪೊಲೀಸರು ಮತ್ತೆ ರಜತ್‌ನನ್ನು ಬಂಧಿಸಿದ್ದು, ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ರಜತ್‌ಗೆ ನೋಟಿಸ್ ನೀಡಿದ್ದರು. ಜತೆಗೆ ರೀಲ್ಸ್‌ಗ ಬಳಸಿದ ಮಚ್ಚು ಪತ್ತೆಯಾಗಿಲ್ಲ. ಆ ಬಳಿಕ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ, ಪೊಲೀಸರ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾಣ ವ್ಯಕ್ತಪಡಿಸಿರುವ ನ್ಯಾಯಾಲಯವು NBW ಜಾರಿ ಮಾಡಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ರಜತ್‌ನನ್ನು ಬಂಧಿಸಲಾಗಿದೆ. ಇನ್ನು ರಜತ್ ಬಂಧನದ ನಂತರ, ಪೊಲೀಸರು ವಿನಯ್ ಗೌಡ ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಆ ನಂತರ, ಪೊಲೀಸರು ಇಬ್ಬರನ್ನೂ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಬಂಧನ ಭೀತಿ ಶುರುವಾಗುತ್ತಿದ್ದಂತೆ ವಿನಯ್ ಗೌಡ ಪ್ರತಿಕ್ರಿಯಿಸಿದ್ದು, ನಾನು ಸಿನಿಮಾ ಚಿತ್ರೀಕರಣದಲ್ಲಿದ್ದೇನೆ, ನಿನ್ನೆ ಪೊಲೀಸ್ ಠಾಣೆಗೆ ಹೋಗಿದ್ದೆ, ವಾರಂಟ್ ಜಾರಿಯಾಗಿದೆಯೋ ಇಲ್ಲವೋ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಸದ್ಯಕ್ಕೆ ಮನೆಯಲ್ಲಿಲ್ಲ, ನನಗೆ ಯಾವುದೇ ಕರೆ ಬಂದಿಲ್ಲ ಎಂದು ಹೇಳಿದ್ದಾರೆ.