NEWS

ಅರ್ಹ ಅಭ್ಯರ್ಥಿಗಳ ಯುವನಿಧಿಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್‌. ಶಿವಶಂಕರ್ ತಿಳಿಸಿದ್ದಾರೆ.

ಯುವನಿಧಿ ಯೋಜನೆಗೆ ಮುಖ್ಯಮಂತ್ರಿಗಳು ಡಿ.26-2023 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಇದಕ್ಕೆ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.Karnataka.gov.in ನಲ್ಲಿ ನೋಂದಾಯಿಸಲು ತಿಳಿಸಲಾಗಿದೆ. ಪದವಿ/ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ.

ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ. ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ 1800-599-9918 ಇಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ