NEWSಉದ್ಯೋಗಶಿಕ್ಷಣ-

ಸಿ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆಸಿದ್ದು ದುರ್ನಡತೆಯ ಪರಮಾವಧಿ : ಜೆಡಿಎಸ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಪಿಎಸ್ಸಿಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆ (KPSC Exam) ಕಲಬುರಗಿಯಲ್ಲಿ ಭಾನುವಾರ ನಡೆದ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆಸಿದ್ದು ದುರ್ನಡತೆಯ ಪರಮಾವಧಿ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್, ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ? ಎಂದು ಕಿಡಿಕಾರಿದೆ.

ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ ಟೀಕಿಸಿದೆ.

ಒಂದೆಡೆ ಗೃಹಲಕ್ಷ್ಮೀ ಎನ್ನುವ ರಾಜ್ಯ ಸರ್ಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮೀಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು? ಅವರಿಗೆ ಅಷ್ಟೊಂದು ಸೂಕ್ಷ್ಮಪ್ರಜ್ಞೆಯ ಕೊರತೆಯೇ? ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ? ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ ಎನ್ನುತ್ತಾರೆ ಪರೀಕ್ಷಾರ್ಥಿಗಳು. ಹಾಗಾದರೆ, ಪರೀಕ್ಷಾ ಕೇಂದ್ರಕ್ಕೆ ಬಂದ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರವನ್ನು ಬಲವಂತವಾಗಿ ತೆಗೆಸಿದ್ದು ದುರ್ನಡತೆತ ಪರಮಾವಧಿ ಅಲ್ಲದೆ ಮತ್ತೇನು ಎಂದು ಜೆಡಿಎಸ್ ಕೆಂಡ ಕಾರಿದೆ.

ಕೆಪಿಎಸ್ಸಿ ಹಾಗೂ ರಾಜ್ಯ ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಬೇಕು ಹಾಗೂ ಇಂಥ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!